ಮಡಿಕೇರಿ ಆ.31 : ಕೇರಳ ರಾಜ್ಯದಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಕೊಡಗು ಜಿಲ್ಲೆಯಲ್ಲಿ ನಕಲಿ ಮದ್ಯ ತಯಾರಿಸುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಕೊಡಗು ಪೊಲೀಸರು ಯಶಸ್ವಿಯಾಗಿದ್ದಾರೆ.NEWS DESK
ಭಾಗಮಂಡಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದ್ದು, ತಾವೂರು ಗ್ರಾಮದ ನಿವಾಸಿ ಹಾಸೀಂ (47) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.NEWS DESK
ತಾವೂರು ಗ್ರಾಮದ ತೋಟದ ಲೈನ್ ಮನೆಯೊಂದರಲ್ಲಿ ಕೇರಳ ಮೂಲದ ವ್ಯಕ್ತಿ ಅಕ್ರಮ ಮದ್ಯ ತಯಾರಿಸುತ್ತಿರುವ ಕುರಿತು ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆ ದಾಳಿ ನಡೆಸಿದ ಪೊಲೀಸರು ಆರೋಪಿ ಸಹಿತ ಮದ್ಯ ತಯಾರಿಸಲು ಬಳಸುವ 60 ಕೆ.ಜಿ 300 ಗ್ರಾಂ CAUSTIC CARAMEL, 2000 ಖಾಲಿ ಬಾಟಲ್, ಕ್ಯಾಪ್ ಮತ್ತು ಲೆಬಲ್ ಗಳನ್ನು ವಶಪಡಿಸಿಕೊಂಡರು.
ಮಡಿಕೇರಿ ಉಪ ವಿಭಾಗದ ಡಿವೈಎಸ್‌ಪಿ ಎಂ.ಜಗದೀಶ್, ಗ್ರಾಮಾಂತರ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಭಾಗಮಂಡಲ ಪಿಎಸ್‌ಐ ಶೋಭಾ ಲಮಾಣಿ ಹಾಗೂ ಸಿಬ್ಬಂದಿಗಳು ವಿಶೇಷ ತಂಡವನ್ನು ರಚಿಸಿ ತನಿಖೆ ಕೈಗೊಂಡು ಕಾರ್ಯಾಚರಣೆ ನಡೆಸಿದರು.NEWS DESK
ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯ ದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.NEWS DESK
Breaking News
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*
- *ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ : ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ*
- *ಕಟ್ಟೆಹಾಡಿ ಅರಣ್ಯ ಹಕ್ಕು ಸಮಿತಿ ರಚನೆ : ಆದಿವಾಸಿಗಳನ್ನು ಒಕ್ಕಲೆಬ್ಬಿಸದಂತೆ ಆಗ್ರಹ*
- *ನ.29 ರಂದು ವಾಲ್ನೂರು-ತ್ಯಾಗತ್ತೂರು ಗ್ರಾಮ ಸಭೆ*
- *ಕೊಡಗು : ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ*