ಸುಂಟಿಕೊಪ್ಪ ಸೆ.1 : ಕೂಡಿಗೆ ಕ್ರೀಡಾ ಶಾಲಾ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪಂದ್ಯಾವಳಿಯಲ್ಲಿ
ಕೊಡಗರಹಳ್ಳಿಯ ಸುಂಟಿಕೊಪ್ಪ ನಾಡು ಪ್ರೌಢಶಾಲಾ ಬಾಲಕರ ಹಾಕಿ ತಂಡವು ವಿಜೇತಗೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಮಹೇಂದ್ರ ತಿಳಿಸಿದ್ದಾರೆ.







