ಮಡಿಕೇರಿ ಸೆ.1 : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ಜಿಲ್ಲಾ ನೆಹರು ಯುವ ಕೇಂದ್ರ, ಯುವ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ ತಾಲ್ಲೂಕು ಯುವ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಹಾಕತ್ತೂರು ತೊಂಭತ್ತುಮನೆ ತ್ರಿನೇತ್ರ ಯುವಕ ಸಂಘದ ವತಿಯಿಂದ ಸೆ.3 ರಂದು ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ತ್ರಿನೇತ್ರ ಯುವಕ ಸಂಘದ ಕಾರ್ಯದರ್ಶಿ ಎಂ.ಎಂ.ಅಬೂಬಕ್ಕರ್, ತೊಂಭತ್ತುಮನೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬೆಳಗ್ಗೆ 9 ಗಂಟೆಗೆ ಕ್ರೀಡಾಕೂಟಕ್ಕೆ ಚಾಲನೆ ದೊರೆಯಲಿದೆ. ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಹಾಗೂ ತೊಂಭತ್ತುಮನೆ ತ್ರಿನೇತ್ರ ಯುವಕ ಸಂಘದ ಅಧ್ಯಕ್ಷರೂ ಆಗಿರುವ ಪಿ.ಪಿ.ಸುಕುಮಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಮುಖ್ಯ ಅತಿಥಿಗಳಾಗಿ ಹಾಕತ್ತೂರು ಗ್ರಾ.ಪಂ ಅಧ್ಯಕ್ಷ ಬಿ.ಕೆ.ಯತೀಶ್, ಸದಸ್ಯರಾದ ಹೆಚ್.ಟಿ.ಕಿರಣ, ಶೈನಿ, ತೊಂಭತ್ತುಮನೆ ಶಾಲಾಭಿವೃದ್ಧಿ ಹಾಗೂ ಮೇಲಸ್ತುವಾರಿ ಸಮಿತಿ ಅಧ್ಯಕ್ಷ ಕೆ.ವೈ.ಜಲೀಲ್, ಮಡಿಕೇರಿ ತಾಲೂಕು ಅಧ್ಯಕ್ಷ ಬಾಳಾಡಿ ದಿಲೀಪ್ ಕುಮಾರ್, ತೊಂಭತ್ತುಮನೆ ತ್ರೀನೇತ್ರ ಯುವಕ ಸಂಘದ ಸಲಹೆಗಾರ ಎ.ಕೆ.ನಾಗೇಶ್ ನಾಯ್ಡ್, ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಮ್.ಪಿ.ಸಾಬು ತಿಮ್ಮಯ್ಯ, ದಾನಿಗಳಾದ ಉಳುವಾರನ ಪಳಂಗಪ್ಪ, ಕ್ರೀಡಾಕೂಟದ ಅನ್ನದಾನಿ ಬಿ.ಎ.ಮೊಹಮ್ಮದ್ ಅಲಿ, ಹಾಕತ್ತೂರು ಗ್ರಾಮ ಸಹಾಯಕ ಬಿ.ಎನ್.ಪ್ರಸಾದ್ ಪಾಲ್ಗೊಳ್ಳಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಪಾಣತ್ತಲೆ ಉತ್ತಯ್ಯ, ಲಾಲಮ್ಮ, ಪಂಜಿಪಳ್ಳ ರಾಧಾಕೃಷ್ಣ, ಸುಶೀಲ, ತುಳಸಿ ನಾಗೇಶ್, ಎ.ಕೆ.ಕಾರ್ಯಪ್ಪ, ಟಿ.ಕೆ.ಮಾಧವ ಪಾಲ್ಗೊಳ್ಳಲಿದ್ದಾರೆ.
:: ಕ್ರೀಡಾ ಸ್ಪರ್ಧೆಗಳು ::
ಪುರುಷ ಹಾಗೂ ಮಹಿಳೆಯರಿಗೆ ಹಗ್ಗಜಗ್ಗಟ, 1 ರಿಂದ 3ನೇ ತರಗತಿ ವಿದ್ಯಾರ್ಥಿಗಳಿ ವಿಷದ ಚೆಂಡು, ಸಾರ್ವಜನಿಕ ಪುರುಷ ಹಾಗೂ ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗೆ ರಸ್ತೆ ಓಟ, ಸಾರ್ವಜನಿಕ ಮಹಿಳೆಯರಿಗೆ ಸೂಜಿ ನೂಲಿನ ಓಟ, ಸಂಗೀತ ಕುರ್ಚಿ, ನಿಂಬೆ ಚಮಚ, ಸಾರ್ವಜನಿಕ ಪುರುಷರಿಗೆ ಗೋಣಿ ಚೀಲದ ಓಟ, ಬಸ್ಸಾಟ, ಬಾರದ ಗುಂಡು ಎಸೆತ, 3 ರಿಂದ 5ನೇ ತರಗತಿ ಬಾಲಕ, ಬಾಲಕಿಯರಿಗೆ 100 ಮೀ. ಓಟ, 6 ರಿಂದ 7ನೇ ತರಗತಿ ಯುವಕ, ಯುವತಿಯರಿಗೆ 200 ಮೀ. ಓಟ, 8 ರಿಂದ 10ನೇ ತರಗತಿ ಯುವಕ, ಯುವತಿಯರಿಗೆ 200 ಮೀ. ಓಟ, ಪಿಯುಸಿ ವಿದ್ಯಾರ್ಥಿಗಳಿಗೆ 300 ಮೀ ಓಟ, ಎಲ್‍ಕೆಜಿ ಹಾಗೂ ಯುಕೆಜಿ ವಿದ್ಯಾರ್ಥಿಗಳಿಗೆ ಕಾಳು ಹೆಕ್ಕುವುದು, ಸಾರ್ವಜನಿಕ ದಂಪತಿಗಳಿಗೆ ದಂಪತಿ ಓಟದ ಸ್ಪರ್ಧೆ ನಡೆಯಲಿದೆ ಎಂದು ಅಬೂಬಕ್ಕರ್ ಮಾಹಿತಿ ನೀಡಿದ್ದಾರೆ.
Breaking News
- *ರಾಜ್ಯ ಸರ್ಕಾರದ ವಿರುದ್ಧ ಮಡಿಕೇರಿಯಲ್ಲಿ ಬಿಜೆಪಿ ಪ್ರತಿಭಟನೆ : “ವಕ್ಫ್ ಕಾಯ್ದೆ” ಹಿಂಪಡೆಯಲು ಒತ್ತಾಯ : ಪ್ರತಾಪ್ ಸಿಂಹ ವಾಗ್ಧಾಳಿ*
- *ಶಾಲಾ ಮಕ್ಕಳ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
- *ಕನ್ನಡ ರಾಜ್ಯೋತ್ಸವ : ನ.23 ರಂದು ಮಡಿಕೇರಿಯಲ್ಲಿ ರಸಪ್ರಶ್ನೆ ಮತ್ತು ಗೀತಗಾಯನ ಕಾರ್ಯಕ್ರಮ*
- *ಗಂಗಮ್ಮ ನಿಧನ : ಶಾಸಕ ಪೊನ್ನಣ್ಣ ಸಂತಾಪ*
- *ಕೊಡಗು : ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ : ಜಿಲ್ಲಾಧಿಕಾರಿ ವೆಂಕಟ್ ರಾಜಾ*
- *ಪಡಿತರ ಚೀಟಿ ಪರಿಷ್ಕರಣೆ : ಅರ್ಹ ಬಿಪಿಎಲ್ ಕಾರ್ಡ್ ರದ್ದುಗೊಳಿಸುವುದಿಲ್ಲ : ಸಚಿವ ಮುನಿಯಪ್ಪ*
- *ಕೊಡಗು ಬ್ಲಡ್ ಡೋನಸ್೯ ಸಂಸ್ಥೆಯ 7ನೇ ವಾಷಿ೯ಕೋತ್ಸವ : ಜೀವ ಉಳಿಸುವ ರಕ್ತದಾನಿಗಳೇ ನಿಜವಾದ ಹೀರೋಗಳು : ಅನಿಲ್ ಹೆಚ್.ಟಿ.*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ : ಜಾನ್ಸನ್ ಪಿಂಟೋ ಸೇರಿ ಹಲವರು ಕಣದಲ್ಲಿ*
- *ಕಲ್ಲು ಬಾಯ್ಸ್ ಲೈಕ್ಸ್ ಫ್ಯಾಶನ್ ಫುಟ್ಬಾಲ್ ಕಪ್ : ನಿಯೋನ್ ಎಫ್.ಸಿ ಅಮ್ಮತ್ತಿ ಚಾಂಪಿಯನ್*
- *ಗ್ರಾ.ಪಂ ಉಪಚುನಾವಣೆ : ಕೊಡಗಿನ ವಿವಿಧೆಡೆ ಮದ್ಯ ಮಾರಾಟ ನಿಷೇಧ*