ಬೆಂಗಳೂರು ಸೆ.1 : ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಕಳೆದ ಬಾರಿ ಲೋಕಸಭಾ ಚುನಾವಣೆ ಸಂದರ್ಭ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎನ್ನುವ ಆರೋಪದಡಿ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿತ್ತು.
ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿರುದ್ಧ ಸೋಲು ಕಂಡಿದ್ದ ಅಂದಿನ ಬಿಜೆಪಿ ಅಭ್ಯರ್ಥಿ ಅರಕಲಗೂಡು ಮಂಜು ಅವರು 2019ರಲ್ಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿ ಪ್ರಜ್ವಲ್ ಆಸ್ತಿ ಘೋಷಣೆ ವಿವರ, ಪ್ರಮಾಣ ಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದ್ದರು.
ಪ್ರಕರಣದ ವಿಚಾರಣೆಯ ನಂತರ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಆದೇಶಿಸಿದೆ.










