ಮಡಿಕೇರಿ ಸೆ.1 : ಕೊಡಗು ಜಿಲ್ಲಾ ಪಂಚಾಯತ್‍ನಲ್ಲಿ ಕಳೆದ ಒಂದು ವರ್ಷಗಳಿಂದ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಜಗದೀಶ್ ಎಸ್.ಮತ್ತು ಅಧೀಕ್ಷಕರಾದ ಪಿ.ಪಿ.ಇಂದಿರಾ ಅವರನ್ನು ಆತ್ಮೀಯವಾಗಿ ಬೀಳ್ಕೊಡಲಾಯಿತು.
ನಗರದ ಜಿ.ಪಂ.ಕಚೇರಿ ಸಭಾಂಗಣದಲ್ಲಿ ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಫಲ-ತಾಂಬೂಲ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಯೋಜನಾಧಿಕಾರಿ ಜಗದೀಶ್ ಅವರು 25 ವರ್ಷಕಾಲ ಸರ್ಕಾರಿ ಸೇವೆ ಸಲ್ಲಿಸಿದ್ದು ಖುಷಿ ತಂದಿದೆ. ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ವಿವಿಧ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಸಂತಸ ತಂದಿದೆ ಎಂದರು.
ಸರ್ಕಾರಿ ವೃತ್ತಿಯಲ್ಲಿ ಸಮಯ ಪ್ರಜ್ಞೆ ಮತ್ತು ತಾಳ್ಮೆ ಬಹು ಮುಖ್ಯವಾದುದಾಗಿದೆ. ಇವೆರಡನ್ನು ಅಳವಡಿಸಿಕೊಂಡಲ್ಲಿ ವೃತ್ತಿ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದರು.
ಅಧೀಕ್ಷಕರಾದ ಪಿ.ಪಿ.ಇಂದಿರಾ ಅವರು ಮಾತನಾಡಿ 35 ವರ್ಷಗಳ ಸರ್ಕಾರಿ ವೃತ್ತಿ ಜೀವನ ಸಾಕಷ್ಟು ತೃಪ್ತಿ ತಂದಿದ್ದು, ವೃತ್ತಿ ಜೀವನದಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನು ಸ್ಮರಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಮಾತನಾಡಿ, ನಿವೃತ್ತಿ ಎಂಬುದು ಸರ್ಕಾರಿ ನೌಕರರಿಗೆ ಕಡ್ಡಾಯವಾದುದಾಗಿದೆ. ಒತ್ತಡಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿಕೊಂಡು ಕಾರ್ಯನಿರ್ವಹಿಸಬೇಕು. ನಿವೃತ್ತಿಯ ನಂತರವೂ ಕ್ರಿಯಾಶೀಲರಾಗಿರಬೇಕು ಎಂದರು.
ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು ಮಾತನಾಡಿ, ಜಗದೀಶ್ ಅವರೊಂದಿಗೆ 10 ವರ್ಷಗಳ ಒಡನಾಟವಿದೆ ಎಂದರು.
ತಂದೆಯವರು ಸೇವೆ ಸಲ್ಲಿಸಿದ ಕಚೇರಿಯಲ್ಲೇ ನಿವೃತ್ತಿ: ಜಗದೀಶ್ ಅವರ ತಂದೆಯವರಾದ ದಿವಂಗತ ಶೇಷು ನಾಯ್ಕ್ ಅವರು ಕೊಡಗು ಜಿಲ್ಲಾ ಪರಿಷತ್‍ನಲ್ಲಿ ಉಪ ಕಾರ್ಯದರ್ಶಿಯಾಗಿ 1-4-1987 ರಿಂದ 29-6-1990 ರ ವರೆಗೆ ಕಾರ್ಯನಿರ್ವಹಿಸಿದ್ದಾರೆ. ತಂದೆಯವರು ಸೇವೆ ಸಲ್ಲಿಸಿದ ಕಚೇರಿಯಲ್ಲಿಯಲ್ಲೇ ಯೋಜನಾ ನಿರ್ದೇಶಕರಾಗಿ ಜಗದೀಶ್ ಅವರು ವಯೋ ನಿವೃತ್ತಿ ಹೊಂದುತ್ತಿರುವುದು ಮೆಚ್ಚುವಂತಹದ್ದು ಎಂದರು.
ಜಿ.ಪಂ.ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಸಹಾಯಕ ಯೋಜನಾಧಿಕಾರಿ ಜೀವನ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾದ ರವೀಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇತರರು ಹಾಜರಿದ್ದರು. ಎನ್‍ಆರ್‍ಎಲ್‍ಎಂ ಸಂಜೀವಿನಿ ವಿಭಾಗದ ಗಾಯತ್ರಿ ನಿರೂಪಿಸಿದರು, ಜಿಲ್ಲಾ ಸಂಪನ್ಮೂಲ ಕೇಂದ್ರದ ಆಡಳಿತ ಸಹಾಯಕರಾದ ಗಾಯತ್ರಿದೇವಿ ಪ್ರಾರ್ಥಿಸಿದರು.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*