ಶ್ರೀಹರಿಕೋಟಾ: ಚಂದ್ರಯಾನ-3 ಯಶಸ್ಸಿನ ಖುಷಿಯಲ್ಲಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇದೀಗ ತನ್ನ ಬಹು ನಿರೀಕ್ಷಿತ ಆದಿತ್ಯಾ L1 ಉಪಗ್ರಹ ಉಡಾವಣೆಯನ್ನು ಯಶಸ್ವಿಯಾಗಿ ಉಡಾಯಿಸಿದೆ.
ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಆದಿತ್ಯಾ ಎಲ್ 1 ನೌಕೆಯನ್ನು ಹೊತ್ತ ಪಿಎಲ್ಎಲ್ ವಿ- ಸಿ-57 ರಾಕೆಟ್ ಬೆಳಗ್ಗೆ 11.50ಕ್ಕೆ ನಭಕ್ಕೆ ಹಾರಿತು. ತನ್ನ ಎಲ್ಲ ಹಂತಗಳನ್ನು ಅತ್ಯುತ್ತಮವಾಗಿ ನಿಭಾಯಿಸಿದ ಪಿಎಸ್ ಎಲ್ ವಿ ಸಿ 57 ನೌಕೆ ಎಲ್ಲ ಮೂರೂ ಹಂತಗಳನ್ನು ಯಶಸ್ವಿಯಾಗಿ ನಿಭಾಯಿಸಿ ನೌಕೆಯನ್ನು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ತಲುಪಿಸಿತು.
ಇಸ್ರೋ ಆದಿತ್ಯ ಎಲ್-1 ನೌಕೆಯನ್ನ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ದೂರದ ಲಾಂಗ್ರೇಜ್ ಪಾಯಿಂಟ್‌ಗೆ ತಲುಪಿ ಸೂರ್ಯನ ಬಗ್ಗೆ ಅಧ್ಯಯನ ನಡೆಸಲಿದೆ.