ಮಡಿಕೇರಿ ಸೆ.2 : ಕೈಲ್ ಮುಹೂರ್ತ (ಕೈಲ್‍ಪೊಳ್ದ್) ಪ್ರಯುಕ್ತ ಸೆ.3 ರಂದು ತಾಳತ್ತಮನೆಯಲ್ಲಿ 39ನೇ ವರ್ಷದ ಗ್ರಾಮೀಣ ಕ್ರೀಡಾಕೂಟ ನಡೆಯಲಿದೆ.
ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೊಡಗು ನೆಹರು ಯುವ ಕೇಂದ್ರ, ಮಡಿಕೇರಿ ತಾಲೂಕು ಯುವ ಒಕ್ಕೂಟ, ತಾಳತ್ತಮನೆ ನೇತಾಜಿ ಯುವತಿ ಮಂಡಳಿಯ ಸಂಯುಕ್ತಾಶ್ರಯದಲ್ಲಿ ತಾಳತ್ತಮನೆಯ ಸ.ಹಿ.ಪ್ರಾ.ಶಾಲೆ ಆವರಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಕಾಫಿ ಬೆಳೆಗಾರ ಲೋಕೇಶ್ ದೇವಾಯಿತ ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ಮದೆ ಗ್ರಾ.ಪಂ ಸದಸ್ಯ, ನೇತಾಜಿ ಯುವಕ ಮಂಡಲದ ಅಧ್ಯಕ್ಷ ಜೀವನ್ ಪರ್ಲಕೋಟಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪೊಲೀಸ್ ಇಲಾಖೆ ನಿವೃತ್ತರಾದ ಮುಕ್ಕಾಟಿ ಪ್ರಭಾಕರ, ಬೆಳೆಗಾರ ಬೊಟ್ಟೋಳಂಡ ಕಾವೇರಮ್ಮ ಈರಪ್ಪ ಪಾಲ್ಗೊಳ್ಳಲಿದ್ದಾರೆ.
ಅಪರಾಹ್ನ 1 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.









