ಕುಶಾಲನಗರ, ಸೆ.2 : ಉತ್ತರ ಕೊಡಗಿನ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯ, ಶಾಲಾ ಶಿಕ್ಷಣ ಇಲಾಖೆಯ ನೆರವಿನೊಂದಿಗೆ ಶಾಲೆಯ ಇಕೋ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ( ಎನ್.ಎಸ್.ಎಸ್.), ವಿದ್ಯಾರ್ಥಿ ಸಂಘ, ಎಸ್.ಡಿ.ಎಂ.ಸಿ.ವತಿಯಿಂದ ‘ಸ್ವಚ್ಛ ಭಾರತ ಅಭಿಯಾನ’ದಡಿ “ಸ್ವಚ್ಛತಾ ಪಖ್ವಾಡ್ ಆಂದೋಲನ”ಕ್ಕೆ ಚಾಲನೆ ನೀಡಲಾಯಿತು.
ಆಂದೋಲನದ ಅಂಗವಾಗಿ ಸ್ವಚ್ಛತಾ ಶಪಥ ದಿನ ಹಾಗೂ ಸ್ವಚ್ಛತಾ ಜಾಗೃತಿ ದಿನಾಚರಣೆ ಆಚರಿಸುವ ಮೂಲಕ
ಶಾಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಚತೆ ಕಾಪಾಡುವ ಮೂಲಕ “ಸ್ವಚ್ಛ ಶಾಲೆ- ಸ್ವಚ್ಛ ಪರಿಸರ” – ‘ನಮ್ಮ ಗುರಿ’ ಎಂದು ವಿದ್ಯಾರ್ಥಿಗಳು ಸಂಕಲ್ಪ ಮಾಡಿದರು.
ಮಕ್ಕಳಿಗೆ ಸ್ವಚ್ಚತಾ ಪಖ್ವಾಡದ ಮಹತ್ವ ಹಾಗೂ ಸ್ವಚ್ಛತೆಯ ಅರಿವು ಕುರಿತ ಸಂದೇಶ ನೀಡಿದ
ರಾಷ್ಟ್ರೀಯ ಹಸಿರು ಪಡೆ ಇಕೋ ಕ್ಲಬ್ ನ ಕೊಡಗು ಜಿಲ್ಲಾ ನೋಡಲ್ ಅಧಿಕಾರಿಯೂ ಆದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮ್ ಕುಮಾರ್, ಸೆ.1 ರಿಂದ ಸೆ.15ರವರೆಗೆ ಎರಡು ವಾರಗಳ ಕಾಲ ಶಾಲಾ ಹಂತ ದಲ್ಲಿ ನಡೆಯುವ ‘ಸ್ವಚ್ಚತಾ ಪಖ್ವಾಡ’ ಕಾರ್ಯ ಕ್ರಮದಲ್ಲಿ ಶಾಲಾ ಮಕ್ಕಳಲ್ಲಿ ಪರಿಸರ ಸ್ವಚ್ಚತೆ ಬಗ್ಗೆ ಜಾಗೃತಿ ಮೂಡಿಸಿ ಪ್ರತಿಯೊಬ್ಬ ಮಗು ವೈಯಕ್ತಿಕವಾಗಿ ಶಾಲೆ, ಸಮುದಾಯ ಹಾಗೂ ಮನೆ ಮತ್ತು ಸುತ್ತಲಿನ ಪರಿಸರವನ್ನು ಸ್ವಚ್ಚವಾಗಿ ಇಟ್ಟು ಕೊಳ್ಳಲು ಪ್ರೇರೇಪಿಸಲಾಗುತ್ತಿದೆ ಎಂದರು.
ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಆರೋಗ್ಯ ಮತ್ತು ನೈರ್ಮಲ್ಯೀಕರಣದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದು, ವಿದ್ಯಾರ್ಥಿ ಗಳು ವೈಯಕ್ತಿಕ ಶುಚಿತ್ವ ಹಾಗೂ ತನ್ನ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟು ಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳ ಬೇಕೆಂದರು.
ಶಾಲೆಯ ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಬಿ.ಡಿ.ರಮ್ಯ, ಮಕ್ಕಳಿಗೆ ಪರಿಸರ ಸ್ವಚ್ಛತೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು ಎಂದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ಎಂ.ಟಿ.ದಯಾನಂದ ಪ್ರಕಾಶ್, ಮಕ್ಕಳು ತಮ್ಮನ್ನು ಸ್ವಚ್ಚತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಮೂಲಕ ಜನರಲ್ಲಿ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.
ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಬಿ.ಎನ್.ಸುಜಾತ, ಎಸ್.ಎಂ.ಗೀತಾ, ಅನ್ಸಿಲಾ ರೇಖಾ, ವಿದ್ಯಾರ್ಥಿ ನಾಯಕಿ ಐಶ್ವರ್ಯ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಇದ್ದರು.
ಇದೇ ವೇಳೆ ಸ್ವಚ್ಛತಾ ಪಖ್ವಾಡ್ ಆಂದೋಲನದ ಮಹತ್ವ ಹಾಗೂ ಉದ್ದೇಶ ಕುರಿತು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡಲಾಯಿತು.
Breaking News
- *ಹೊಸಕೋಟೆ ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ : ಬೆಳೆನಾಶ : ಸೂಕ್ತ ಕ್ರಮಕ್ಕೆ ಬೆಳೆಗಾರರ ಆಗ್ರಹ*
- *ಸೋಮವಾರಪೇಟೆ ಸಂತಜೋಸೆಫರ ಪದವಿ ಕಾಲೇಜಿನಲ್ಲಿ ಸಂವಿಧಾನ ಪೀಠಿಕೆ ವಾಚನ*
- *ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿಯಲ್ಲಿ ಸಂವಿಧಾನ ದಿನ ಆಚರಣೆ*
- *ತೋಳೂರುಶೆಟ್ಟಳ್ಳಿ : ಡಾ. ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ*
- *ಸೋಮವಾರಪೇಟೆ ಗ್ಯಾರೆಂಟಿ ಯೋಜನೆಯ ಮಾಸಿಕ ಸಭೆ*
- *ಬೆಳೆ ಸಮೀಕ್ಷೆ ಕಾರ್ಯ : ಆಕ್ಷೇಪಣೆ ಸಲ್ಲಿಸಲು ನ.30 ಕೊನೆ ದಿನ*
- *ಕೆ.ಎಂ.ಎ. ವತಿಯಿಂದ ಸಂವಿಧಾನ ದಿನಾಚರಣೆ : ಜನರ ಹಕ್ಕುಗಳಿಗೆ ಸಂವಿಧಾನವೇ ಮೂಲ : ಸೂಫಿ ಹಾಜಿ*
- *ಕೊಡಗಿನ ಆದಿವಾಸಿಗಳ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ : ಅಧಿಕಾರಿಗಳಿಗೆ 2 ತಿಂಗಳ ಗಡುವು*
- *ಸಿಎನ್ಸಿಯಿಂದ “ಕೊಡವ ನ್ಯಾಷನಲ್ ಡೇ” ಮತ್ತು ಸಂವಿಧಾನ ದಿನಾಚರಣೆ : 9 ಪ್ರಮುಖ ನಿರ್ಣಯಗಳ ಮಂಡನೆ*
- *ಮಡಿಕೇರಿ : ನ.27 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*