ಮಡಿಕೇರಿ ಸೆ.2 : ಪ್ರಸಕ್ತ (2023-24) ಸಾಲಿನಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ಜಿಲ್ಲೆಯ ಐದು ತಾಲೂಕುಗಳಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಯು ಇಲಾಖಾ ವತಿಯಿಂದ ನಡೆಯಲಿದೆ.
ಈ ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಆಯಾಯ ತಾಲೂಕಿನ ಕ್ರೀಡಾಪಟುಗಳು ಭಾಗವಹಿಸಬಹುದು. ಸೆ. 11 ರಂದು ಮಡಿಕೇರಿ ತಾಲೂಕು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ, ಸೆ.12 ಕುಶಾಲನಗರ ತಾಲೂಕು ಕೂಡಿಗೆ ಕ್ರೀಡಾಶಾಲೆ ಮೈದಾನ, ಸೆ.13 ಸೋಮವಾರಪೇಟೆ ತಾಲೂಕಿಗೆ ಕೂಡಿಗೆ ಕ್ರೀಡಾಶಾಲೆ ಮೈದಾನ, ಸೆ.14 ರಂದು ತಾಲ್ಲೂಕಿಗೆ ಮತ್ತು ಸೆ.15 ವಿರಾಜಪೇಟೆ ತಾಲ್ಲೂಕಿಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯ ಹಾಗೂ ಜೂನಿಯರ್ ಕಾಲೇಜ್ ಆಟದ ಮೈದಾನದಲ್ಲಿ ಕ್ರೀಡಾಕೂಟ ನಡೆಯಲಿದೆ.
ಜಿಲ್ಲೆಯ ಆಸಕ್ತ ಪುರುಷ ಹಾಗೂ ಮಹಿಳಾ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ದಸರಾ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕಾಗಿ ಕೋರಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂ.ಮಡಿಕೇರಿ ತಾಲೂಕು ಮಹಾಬಲ 9980887499, ಹಾಗೂ ಮನು 9480032712, ಸೋಮವಾರಪೇಟೆ ತಾಲೂಕು ವೆಂಕಟೇಶ್ 9844326007 ಕುಶಾಲನಗರ ತಾಲೂಕು, ಮಂಜುನಾಥ್ 9342563014, ಪೊನ್ನಂಪೇಟೆ ಸುಬ್ಬಯ್ಯ 8197790350, ವಿರಾಜಪೇಟೆ ತಾಲ್ಲೂಕು ಗಣಪತಿ 8951287301 ನ್ನು ಸಂಪರ್ಕಿಸಬಹುದು.
ಆಯಾಯ ತಾಲೂಕಿನ ಕ್ರೀಡಾಪಟುಗಳು ತಮ್ಮ ತಾಲೂಕಿನ ಕ್ರೀಡಾಕೂಟದಲ್ಲಿ ಮಾತ್ರ ಭಾಗವಹಿಸಬೇಕು. ಒಂದು ತಾಲೂಕಿನಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಮತ್ತೊಂದು ತಾಲೂಕಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ. ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ. ಬೆಳಗ್ಗೆ 9:30ರ ಒಳಗೆ ಕಡ್ಡಾಯವಾಗಿ ಸ್ಥಳದಲ್ಲಿ ನೋಂದಾಯಿಸಿಕೊಳ್ಳತಕ್ಕದ್ದು. ತೀರ್ಪುಗಾರರ ತೀರ್ಮಾನವೇ ಅಂತಿಮ ತೀರ್ಮಾನ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ತಿಳಿಸಿದ್ದಾರೆ.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*