ಸೋಮವಾರಪೇಟೆ ಸೆ.3 : ಕೊಡಗು ಜಿಲ್ಲಾ ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗು ನೇರುಗಳಲೆ ಸರ್ಕಾರಿ ಪ್ರಾಥಮಿಕ ಹಾಗು ಪ್ರೌಢಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೆ. 6ರ ಬುಧವಾರ ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟ ನಡೆಯಲಿದೆ.
ನೇರುಗಳಲೆ ಶಾಲಾ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಡಾ. ಮಂತರ್ ಗೌಡ ಬೆಳಿಗ್ಗೆ 10-30ಕ್ಕೆ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ನೇರುಗಳಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಕೆ. ವಿನೋದ್ ಕುಮಾರ್ ವಹಿಸಲಿದ್ದಾರೆ. ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷೆ ಎ.ಡಿ. ಪದ್ಮಾವತಿ, ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಎಚ್.ಪಿ. ದಿಲೀಪ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
7ರ ಗುರುವಾರ ಕ್ರೀಡಾಕೂಟದ ಸಮಾರೋಪ ಸಮಾರಂಭ ಸಂಜೆ 4-30ಕ್ಕೆ ನಡೆಯಲಿದ್ದು, ಅಧ್ಯಕ್ಷತೆಯನ್ನು ನೇರುಗಳಲೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಜಲಜಾಕ್ಷಿ ದಿನೇಶ್ ವಹಿಸಲಿದ್ದಾರೆ. ಇದೇ ಸಂದರ್ಭ ಭಾರತ ಹಾಕಿ ಆಟಗಾರ ಎಸ್.ವಿ. ಸುನಿಲ್, ಪ್ರೊ ಕಬಡ್ಡಿ ಆಟಗಾರ ರತನ್ ಅವರುಗಳನ್ನು ಸನ್ಮಾನಿಸಲಾಗುವುದು ಎಂದು ಕ್ರೀಡಾಕೂಟದ ಸಂಘಟಕ ಕೆ.ಆರ್. ರತ್ನಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










