ಮಡಿಕೇರಿ ಸೆ.4 : ಪ್ರಸಕ್ತ (2023-24) ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳನ್ನು ಅನುಷ್ಠಾನಗೊಳಿಸುತ್ತಿರುವ ರೈತರಿಗೆ ವಿತರಿಸಲಾಗುವುದು.
ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗಳನ್ನು ಆಯ್ಕೆಯಾದ ಜಿಲ್ಲೆಯ 10 ರೈತರಿಗೆ ತಲಾ ರೂ. 25 ಸಾವಿರ ಹಾಗೂ ತಾಲೂಕು ಮಟ್ಟದ ಪ್ರಶಸ್ತಿಯನ್ನು ಆಯಾಯ ತಾಲೂಕಿನ 5 ರೈತರಿಗೆ ತಲಾ 10 ಸಾವಿರ ರೂ.ವನ್ನು ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ತೀರ್ಮಾನದಂತೆ ವಿತರಿಸಲಾಗುವುದು.
ಪ್ರಶಸ್ತಿಗೆ ರೈತರು ಭಾಗವಹಿಸಬಹುದಾದ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಾದ ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ದಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಹಸಿರು ಮನೆ, ಕಸಿ ಅಭಿವೃದ್ದಿ ಸಸ್ಯಕಾಶಿ, ಕೃಷಿ ಸಂಸ್ಕರಣೆ ಅರಣ್ಯ ಕೃಷಿ, ಆಡು, ಕುರಿ,ಮೊಲ ಸಾಕಾಣಿಕೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಅರ್ಹ ಆಸಕ್ತ ರೈತರು ಅರ್ಜಿಯನ್ನು ಆಯಾಯ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸೆಪ್ಟೆಂಬರ್, 30 ರ ಸಂಜೆ 5 ಗಂಟೆ ಒಳಗೆ ಸಲ್ಲಿಸಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*