ಮಡಿಕೇರಿ ಸೆ.4 : ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಸಂಘಟನೆಯ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ಹರೀಶ್ ಜಿ.ಆಚಾರ್ಯ ಆಯ್ಕೆಯಾಗಿದ್ದಾರೆ.
ಮಾನವ ಹಕ್ಕುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಮತ್ತು ಲಂಚ ಮುಕ್ತ ಸಮಾಜ ನಿರ್ಮಿಸಲು ಸಂಘಟನೆ ಕಟಿಬದ್ಧವಾಗಿದೆ. ರಾಷ್ಟ್ರೀಯ ಮಟ್ಟದಲ್ಲಿ ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ದೇಶಸೇವೆ ಮಾಡಿದ ಹಿರಿಯ ಅಧಿಕಾರಿಗಳು ಸಂಘಟನೆಯಲ್ಲಿದ್ದಾರೆ. ಕಾನೂನು ಬದ್ಧವಾಗಿ ಸಾರ್ವಜನಿಕರಿಗೆ ನ್ಯಾಯ ಒದಗಿಸಲು ಶ್ರಮ ಪಡುತ್ತಿದ್ದಾರೆ ಎಂದು ಹರೀಶ್ ಜಿ.ಆಚಾರ್ಯ ತಿಳಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ಹೆಚ್ಚಾಗುತ್ತಿದೆ. ಸರಕಾರಗಳು ಕೂಡ ಜನರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವಲ್ಲಿ ಎಡವುತ್ತಿವೆ. ಸಕಾಲದಲ್ಲಿ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಆದ್ದರಿಂದ ಕರ್ನಾಟಕ ರಾಜ್ಯದಲ್ಲೂ ಮಾನವ ಹಕ್ಕುಗಳ ಕುರಿತು ಜನಜಾಗೃತಿ ಮೂಡಿಸುವ ಮೂಲಕ ನ್ಯಾಯದ ಪರ ಹೋರಾಟ ನಡೆಸಲು ಸಂಘಟನೆ ಸಜ್ಜಾಗಿದೆ. ನಿವೃತ್ತ ನ್ಯಾಯಾಧೀಶರು, ಐಎಎಸ್, ಐಪಿಎಸ್ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳು, ಯೋಧರು, ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸಂಘಟನೆಯನ್ನು ಬಲಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
Breaking News
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*