ಸುಂಟಿಕೊಪ್ಪ ಸೆ.4 : ಯುವ ಪೀಳಿಗೆ ದುಶ್ಚಟಗಳ ವಿರುದ್ಧ ಸಮರ ಸಾರುವುದರಿಂದ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸಲು ಸಾಧ್ಯವೆಂದು ಸುಂಟಿಕೊಪ್ಪ ಎಎಸ್‌ಐ ಶ್ರೀನಿವಾಸ್ ಮಂಜಿಕೆರೆ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಕಾರ್ಯಕ್ಷೇತ್ರದ ವತಿಯಿಂದ ಮಂಜಿಕೆರೆ ಪ್ರೌಢಶಾಲೆಯಲ್ಲಿ ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ದ್ಘಾಟಿಸಿ ಮಾತನಾಡಿದ ಅವರು ಯುವಜನತೆ ದುಶ್ಚಟಗಳಿಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಇದರಿಂದ ಸಮಾಜ ಘಾತುಕ ಕಹಿ ಘಟನೆಗಳು ಸಂಭವಿಸುತ್ತಿದೆ. ಪೋಷಕರು ಸಮಾಜದಲ್ಲಿ ತಲೆತಗ್ಗಿಸುವಂತ್ತಾಗಿದೆ. ವಿದ್ಯಾರ್ಥಿಗಳು ದುಶ್ಚಟಗಳಿಗೆ ಪ್ರೇರಣೆ ನೀಡುವ ಮತ್ತು ಪ್ರೇರೆಪಿಸುವ ಜನತೆಯಿಂದ ದೂರ ಇರಬೇಕು. ಉತ್ತಮ ಸಮಾಜ ನಿರ್ಮಾಣ ಮಾಡಲು ವಿದ್ಯಾರ್ಥಿಗಳು ಸಹಕರಿಸುವಂತೆ ಕಿವಿಮಾತು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಬಾರ ಮುಖ್ಯ ಶಿಕ್ಷಕ ಮೂರ್ತಿ ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದಾಗ ಆರೋಗ್ಯವಂತರಾಗಿ ಬದುಕಬಹುದೆಂದು ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಭವ್ಯ, ಕಾನ್‌ಬೈಲ್ ಒಕ್ಕೂಟದ ಅಧ್ಯಕ್ಷೆ ಖತ್ತೀಜ, ಶಾಲಾ ಶಿಕ್ಷಕರುಗಳಾದ ಮಾಲಾದೇವಿ, ಬಸವರಾಜು,ಮಹೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾನ್‌ಬೈಲ್ ಸೇವಾ ಪ್ರತಿನಿಧಿ ಯಶೋಧ ಮತ್ತಿತರರು ಇದ್ದರು.
ಇದೇ ಸಂದರ್ಭ ಸುಂಟಿಕೊಪ್ಪ ಪೊಲೀಸ್ ಠಾಣಾ ಎಎಸ್‌ಐ ಶ್ರೀನಿವಾಸ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.











