ಕಡಂಗ ಸೆ.5 : ಬೆಂಗಳೂರಿನ ಕೇಮ್‌ವೆಲ್ ಬಯೋಫಾರ್ಮಾ ಸಂಸ್ಥೆ ವತಿಯಿಂದ ಕಡಂಗ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ , ನೋಟ್ ಪುಸ್ತಕ, ರೇಖಾಗಣಿತ ಪೆಟ್ಟಿಗೆ ಇನ್ನಿತರ ವಸ್ತುಗಳನ್ನು ವಿತರಿಸಿದರು.
ಈ ಸಂದರ್ಭ ಮಾತನಾಡಿದ ಸಂಸ್ಥೆಯ ಉಪಾಧ್ಯಕ್ಷ ಮಾಳೆಯಂಡ ಪ್ರಕಾಶ್ ನಾಣಯ್ಯ, ವಿದ್ಯಾರ್ಥಿಗಳು ಸೌಲಭ್ಯದ ಸದುಪಯೋಗವನ್ನು ಪಡೆದುಕೊಂಡು ಉನ್ನತ ಹುದ್ದೆಗೇರುವಂತೆ ಪ್ರಯತ್ನಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸದಸ್ಯರು, ಶಾಲಾ ಸ್ಥಳದಾನಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ನೌಫಲ್ ಕಡಂಗ