ನಾಪೋಕ್ಲು ಸೆ.5 : ಇಂದಿರಾನಗರದ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ 18ನೇ ವರ್ಷದ ಗೌರಿ ಗಣೇಶ ಉತ್ಸವವನ್ನು ಸೆ.19 ರಂದು ಸಂಭ್ರಮದಿಂದ ಆಚರಿಸಲಾಗುವುದು.
ಇಂದಿರಾನಗರದಲ್ಲಿ ಬೆಳಿಗ್ಗೆ 9.30 ಗಂಟೆಗೆ ಗಣಪತಿ ಹೋಮದೊಂದಿಗೆ ಗೌರಿ ಗಣೇಶ ಉತ್ಸವ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಗುವುದು. ನಂತರ ಐದು ದಿನಗಳ ಕಾಲ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಪೂಜಾ ಕಾರ್ಯಕ್ರಮ ನಡೆಯಲಿದೆ.
20 ರಂದು ಸಂಜೆ 7 ಗಂಟೆಗೆ ಸ್ಥಳೀಯರಿಂದ ಹಾಡುಗಾರಿಕೆ, 21 ರಂದು ಸಂಜೆ 7 ಗಂಟೆಗೆ ರವಿ ಬಳಗದಿಂದ ಸಂಗೀತ ಸಂಜೆ, 22 ರಂದು ಸಂಜೆ 7 ಗಂಟೆಗೆ ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, 23 ರಂದು ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಲಿದೆ.
ಬಳಿಕ ಭವ್ಯ ಅಲಂಕೃತ ಮಂಟಪದಲ್ಲಿ ಗಣೇಶ ಮೂರ್ತಿಯನ್ನು ಕೊಂಡೊಯ್ದು ಪವಿತ್ರ ಕಾವೇರಿ ನದಿಯಲ್ಲಿ ಸಂಜೆ 7 ಗಂಟೆಗೆ ಉತ್ಸವ ಮೂರ್ತಿಯನ್ನು ವಿಸರ್ಜಿಸಲಾಗುವುದು ಎಂದು ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರು ತಿಳಿಸಿದ್ದಾರೆ.
ವರದಿ : ದುಗ್ಗಳ ಸದಾನಂದ