ಮಡಿಕೇರಿ ಸೆ.5 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಸಂಯುಕ್ತಾಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ನಗರದ ಕೊಡಗು ಗೌಡ ಸಮಾಜದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ತಾಲ್ಲೂಕಿನ ದೇವರಕೊಲ್ಲಿ ಸ.ಕ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಬಿ.ಸಿ.ವನಜ, ನಾಪೋಕ್ಲು ಕೆಪಿಎಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಕೆ.ಪಿ.ಚಂದ್ರಕಲಾ, ಚೆಂಬು ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಪಿ.ಎಸ್.ಕಾಮಾಕ್ಷಿ, ಸೋಮವಾರಪೇಟೆ ತಾಲ್ಲೂಕಿನ ಹಟ್ಟಿಹೊಳೆ ಸ.ಕಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಶಾಂತಶೀಲ, ರಂಗಸಮುದ್ರ ಸ.ಹಿ.ಪ್ರಾ.ಶಾಲೆಯ ಸಹ ಶಿಕ್ಷಕರಾದ ಕೆ.ಕೆ.ಸುನಿತ, ಕೂಡುಮಂಗಳೂರು ಸ.ಪ್ರೌಢ ಶಾಲೆಯ ಹಿಂದಿ ಭಾಷಾ ಶಿಕ್ಷಕರಾದ ಎಂ.ಟಿ.ದಯಾನಂದ ಪ್ರಕಾಶ್, ವಿರಾಜಪೇಟೆ ತಾಲ್ಲೂಕಿನ ಎಲಿಯಂಗಾಡು ಸ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಪಿ.ಎಂ.ಸುಬ್ರಮಣ್ಯ, ಗೋಣಿಕೊಪ್ಪ ಸ.ಮಾ.ಪ್ರಾ.ಶಾಲೆಯ ಮುಖ್ಯ ಶಿಕ್ಷಕರಾದ ಎಚ್.ಕೆ.ಕುಮಾರ್, ಜೆಪಿಎಸ್ ಪ್ರೌಢಶಾಲೆಯ(ಅನುದಾನಿತ) ಮುಖ್ಯ ಶಿಕ್ಷಕರಾದ ಲಾಲ್‍ಕುಮಾರ್ ಅವರಿಗೆ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ ಪೂವಯ್ಯ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಪಿ.ಕೆ.ಶ್ರೀನಿವಾಸ್, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಎಚ್.ಎಸ್.ಚೇತನ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.