ಮಡಿಕೇರಿ ಸೆ.5 : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 58ನೇ ಪುಣ್ಯಸ್ಮರಣೆ ಸೆ.7 ರಂದು ಮಡಿಕೇರಿಯಲ್ಲಿ ನಡೆಯಲಿದೆ ಎಂದು ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಸಹಯೋಗದಲ್ಲಿ ಬೆಳಗ್ಗೆ 11 ಗಂಟೆಗೆ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಪುಣ್ಯಸ್ಮರಣೆಯನ್ನು ಆಚರಿಸಲಾಗುವುದು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾಕುಶಾಲಪ್ಪ, ಏರ್ ಮಾರ್ಷಲ್ ಕೊಡಂದೇರ ನಂದಾ ಕಾರ್ಯಪ್ಪ, ಮಾಜಿ ಸಚಿವ ಮೇರಿಯಂಡ ಸಿ.ನಾಣಯ್ಯ, ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರುಗಳಾದ ಶಾಂತೆಯಂಡ ವೀಣಾ ಅಚ್ಚಯ್ಯ, ಸುನಿಲ್ ಸುಬ್ರಮಣಿ, ಜಿಲ್ಲಾಧಿಕಾರಿ ವೆಂಕಟ್‍ರಾಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಹಾಗೂ ಜನರಲ್ ತಿಮ್ಮಯ್ಯ ಫೋರಂ ನ ಅಧ್ಯಕ್ಷ ಕರ್ನಲ್ ಕಡ್ರತಂಡ ಸುಬ್ಬಯ್ಯ, ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ಸ್ಕ್ವಾ.ಲೀ.ಅಜ್ಜಮಾಡ ಬಿ.ದೇವಯ್ಯ ಮೆಮೋರಿಯಲ್ ಟ್ರಸ್ಟ್ ನ ಅಧ್ಯಕ್ಷ ಅಜ್ಜಮಾಡ ಕಟ್ಟಿ ಮಂದಯ್ಯ, ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯು, ಅಜ್ಜಮಾಡ ಒಕ್ಕದ ಅಧ್ಯಕ್ಷ ಲವ ಕುಶಾಲಪ್ಪ, ಕಾರ್ಯದರ್ಶಿ ಅಜ್ಜಮಾಡ ಬೋಪಣ್ಣ, ಖಜಾಂಚಿ ಅಜ್ಜಮಾಡ ಚಂಗಪ್ಪ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಸೇರಿದಂತೆ ಕೊಡವ ಮಕ್ಕಡ ಕೂಟದ ಸದಸ್ಯರು, ನಿವೃತ್ತ ಯೋಧರು, ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
:: ಸ್ಕ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ::
ಐದೂವರೆ ದಶಕದ ಹಿಂದೆ(1965) ಭಾರತ-ಪಾಕ್ ನಡುವೆ ನಡೆದ ಯುದ್ಧದಲ್ಲಿ ಶತ್ರುಗಳ ವಿಮಾನವನ್ನು ಹೊಡೆದುರುಳಿಸಿ ದೇಶಕ್ಕಾಗಿ ಬಲಿದಾನಗೈದ ಕೊಡಗಿನ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ಕಂಚಿನ ಪ್ರತಿಮೆಯನ್ನು ಕೊಡವ ಮಕ್ಕಡ ಕೂಟ ಕೊಡಗಿನ ಮಂಜಿನ ನಗರಿ ಮಡಿಕೇರಿಯಲ್ಲಿ ಪ್ರತಿಷ್ಠಾಪಿಸುವ ಮೂಲಕ ಅಮರ ವೀರಯೋಧನ ಕೀರ್ತಿಪತಾಕೆ ಅಜರಾಮರವಾಗಿರುವಂತೆ ನೋಡಿಕೊಂಡಿದೆ.
ಭಾರತೀಯ ವಾಯುಸೇನಾ ಪಡೆಯ ಸ್ಕ್ವಾಡ್ರನ್ ಲೀಡರ್ ಹುದ್ದೆಯನ್ನೇರಿ ತನ್ನ ಜೀವದ ಹಂಗನ್ನು ತೊರೆದು ಶತ್ರುಗಳೊಂದಿಗೆ ಹೋರಾಡಿದ ಅಜ್ಜಮಾಡ ದೇವಯ್ಯ ಅವರು ವೀರಮರಣವನ್ನಪ್ಪಿ 58 ವರ್ಷಗಳೇ ಕಳೆದು ಹೋಗಿದೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*