ಮೈಸೂರು ಸೆ.5 : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ – 2023 ರ ಅಂಗವಾಗಿ ಇಂದು ಮೈಸೂರು ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಗಳನ್ನು ಸ್ವಾಗತಿಸಲಾಯಿತು.
ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ, ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಸೇರಿ ಹಲವರು ಹಾಜರಿದ್ದರು.