ವಿರಾಜಪೇಟೆ ಸೆ.5 : ಮಕ್ಕಳು ಶಿಸ್ತುಬದ್ದ ಜೀವನ ನಡೆಸಲು ಶಿಕ್ಷಕರೇ ಪ್ರೇರಣೆಯಾಗಲಿದ್ದಾರೆ. ಶಿಕ್ಷಕರನ್ನು ಗುರುತಿಸುವುದು ಸಮಾಜದ ಜವಾಬ್ದಾರಿ ಎಂದು ಮುಖ್ಯಂತ್ರಿಗಳ ಕಾನೂನು ಸಲಹೆಗಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.
ಶಾಲಾ ಶಿಕ್ಷಣಾ ಇಲಾಖೆ, ವಿರಾಜಪೇಟೆ ತಾಲೂಕು ಶಿಕ್ಷಕರ ದಿನಾಚರಣಾ ಸಮಿತಿ, ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು, ತಾಲೂಕು ಶಿಕ್ಷಕರ ಕಲ್ಯಾಣ ಸಮಿತಿ, ಸಂತ ಅನ್ನಮ್ಮ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು.
ವಿದ್ಯಾರ್ಥಿಗಳ ಓದಿನ ಜೊತೆಗೆ ಭವಿಷ್ಯ ರೂಪಿಸಿಕೊಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡುವ, ಸಮಾಜ ತಿದ್ದುವ ಹಾಗೂ ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಕರು ಕಾರಣವಾಗಲಿದ್ದಾರೆ. ಶಿಕ್ಷಕರು ತಮ್ಮ ಪಾಲಿನ ಕೆಲಸವನ್ನು ಶ್ರದ್ಧೆಯಿಂದ ಮಾಡಬೇಕು. ಪೋಷಕರು ಶಿಕ್ಷಕರನ್ನೆ ದೇವರು ಎಂದು ಭಾವಿಸಿರುತ್ತಾರೆ ಎಂದು ಕಿವಿಮಾತು ಹೇಳಿದರು.
ಶಿಕ್ಷಕರ ದಿನಾಚರಣೆ ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು ದೇಶ ಕಂಡಂತಹ ಅಪ್ರತಿಮ ವ್ಯಕ್ತಿ ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರ ಶಿಸ್ತುಬದ್ದ ಜೀವನವನ್ನು ಎಲ್ಲರೂ ಅಳವಡಿಸಿಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ದೇಶದ ಉನ್ನತಿಗೋಸ್ಕರ ಶ್ರಮಿಸುವಂತಾಗಬೇಕು. ಬದಲಾದ ಕಾಲಘಟ್ಟದಲ್ಲಿ ಶಿಕ್ಷಕರು ಹೊಂದಿಕೊಂಡು ಕೆಲಸ ಮಾಡಬೇಕಿದೆ. ಇಂದು ತಂತ್ರಜ್ಞಾನ ಬಹಳ ಮುಂದುವರೆದಿದೆ. ಪುಸ್ತಕಗಳನ್ನು ಹೊರತುಪಡಿಸಿ ಜೀವನದಲ್ಲಿ ಕಲಿಯುವುದು ಕಲಿಸುವುದು ಬಹಳಷ್ಟಿದೆ ಎಂದರು.
ಮೈಸೂರಿನ ಭಾರತೀಯ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರದ ಯೋಜನಾ ನಿರ್ದೇಶಕ ಡಾ.ನೀಲಗಿರಿ ತಳವಾರ್ ಅವರು ಪ್ರಧಾನ ಭಾಷಣಕಾರರಾಗಿ ಆಗಮಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಶಿಕ್ಷಕ ವೃತ್ತಿಯಂತಹ ಶ್ರೇಷ್ಠ ವೃತ್ತಿ ಮತ್ತೊಂದಿಲ್ಲ. ಶಿಕ್ಷಕ ವೃತ್ತಿಯಲ್ಲಿ ತ್ಯಾಗ ಮನೋಭಾವನೆ ಬೇಕು, ಉತ್ತಮ ಸಂಸ್ಕಾರಯುತ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಿ ದೇಶದ ಅಭ್ಯುದಯಕ್ಕೆ ಅಡಿಪಾಯ ಹಾಕುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ವಿದ್ಯೆ, ಬುದ್ಧಿ ಸೇರಿದಂತೆ ಭಾವನಾತ್ಮಕ ಸಂಬಂಧಗಳನ್ನು ಬೆಳೆಸುವ ಮೂಲಕ ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಬೇಕಾಗಿದೆ ಎಂದರು.
ಇದೇ ಸಂದರ್ಭ ಸೇವೆಯಿಂದ ನಿವೃತ್ತಿಗೊಂಡ ತಾಲೂಕಿನ ವಿವಿಧ ಶಾಲೆಗಳ ಮುಖ್ಯ ಶಿಕ್ಷಕಕರು, ವಿಷಯ ಬೋಧನಾ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಶಿಕ್ಷಕರಿಗೆ ಸಂತಾಪ ಸೂಚಿಸಲಾಯಿತು.
ವಿವಿಧ ಕಾರ್ಯಕ್ರಮ ಹಾಗೂ ಸ್ಫರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಮೊದಲಿಗೆ ವೇದಿಕೆಯಲ್ಲಿದ್ದ ಗಣ್ಯರು ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ವೇದಿಕೆಯಲ್ಲಿ ವಿರಾಜಪೇಟೆ ತಾಲೂಕು ತಹಸೀಲ್ದಾರ್ ಹೆಚ್.ಎನ್. ರಾಮಚಂದ್ರ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪ್ರಕಾಶ್, ಸಂತ ಅನ್ನಮ್ಮ ಕಾಲೇಜು ವ್ಯವಸ್ಥಾಪಕ ರೆ.ಫಾ.ಐಸಾಕ್ ರತ್ನಾಕರ್, ಸಂತ ಅನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ಬೆನ್ನಿ ಜೋಸೆಫ್, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ, ದೈಹಿಕ ಶಿಕ್ಷಣ ಪರಿವೀಕ್ಷಕಿ ಗಾಯತ್ರಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಪಿ.ಉತ್ತಪ್ಪ ಸೇರಿದಂತೆ ಇತರರು ಇದ್ದರು.
ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಶಾಲೆಗಳಿಂದ ಆಗಮಿಸಿದ ಶಿಕ್ಷಕ ವೃಂದದವರು, ಎಲ್ಲಾ ಸಂಘದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*