ಮಡಿಕೇರಿ ಸೆ.5 : ಮಡಿಕೇರಿ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್6 ಭಾಗಮಂಡಲ ಫೀಢ ರ್ ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಸೆ.7 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ತಾಳತ್ತಮನೆ, ಉಡೋತ್ತುಮೊಟ್ಟೆ, ಚೇರಂಬಾಣೆ, ಅಪ್ಪಂಗಳ, ಭಾಗಮಂಡಲ, ತಲಕಾವೇರಿ, ಚೇರಂಗಾಲ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.










