ಮಡಿಕೇರಿ ಸೆ.5 : ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆಯ ಕುರಿತು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮುಂದಿಟ್ಟಿರುವ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಿತು.
ಕೇಂದ್ರ ಸರ್ಕಾರದ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಸ್ವಲ್ಪ ಸಮಯಾವಕಾಶ ಕೋರಿದ ಹಿನ್ನೆಲೆ ಕೋರ್ಟ್ ವಿಚಾರಣೆಯನ್ನು ಅ.4 ಕ್ಕೆ ಮುಂದೂಡಿತು. ಆ.3 ರಂದು ನಡೆದ ವಿಚಾರಣೆ ಸಂದರ್ಭ ಮೂವರು ಪ್ರತಿವಾದಿಗಳು 4 ವಾರಗಳಲ್ಲಿ ಉತ್ತರ ನೀಡುವಂತೆ ಕೋರ್ಟ್ ನಿರ್ದೇಶನ ನೀಡಿತ್ತು.
ಇಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣಾ ದೀಕ್ಷಿತ್ ಅವರು ಅರ್ಜಿಯನ್ನು ಆಲಿಸಿದರು.
ಅರ್ಜಿದಾರರಾದ ಡಾ.ಸುಬ್ರಮಣಿಯನ್ ಸ್ವಾಮಿ ಹಾಗೂ ಸಿಎನ್ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಕೊಡವ ಪರ ವಕೀಲ ಕೀರನ್ ನಾರಾಯಣ್ ವಾದ ಮಂಡಿಸಿದರು. ಸಹಾಯಕ ಸಾಲಿಸಿಟರ್ ಜನರಲ್ ಶಾಂತಿ ಭೂಷಣ್ ಅವರು ಪ್ರತಿವಾದಿಗಳ ಒಕ್ಕೂಟದ ಸರ್ಕಾರದ ಪರವಾಗಿ ವಾದಿಸಿದರು.
ಎನ್.ಯು.ನಾಚಪ್ಪ ಅವರು ಅರ್ಜಿದಾರ ಸಂಖ್ಯೆ-2 ಆಗಿದ್ದಾರೆ. ಕೇಂದ್ರ ಕಾನೂನು ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಮತ್ತು ಕರ್ನಾಟಕ ರಾಜ್ಯವನ್ನು ಪ್ರತಿವಾದಿ ಸಂಖ್ಯೆ ಕ್ರಮವಾಗಿ 1, 2 ಮತ್ತು 3 ಎಂದು ಉಲ್ಲೇಖಿಸಲಾಗಿದೆ.
ಪ್ರಮುಖರಾದ ಶ್ರೇಯಾ ನಾಚಪ್ಪ, ಬೊಳ್ಳಚಂಡ ಶೃಂಗ, ಕಲಿಯಂಡ ಪ್ರಕಾಶ್, ಕಿರಿಯಮಾಡ ಶೆರಿನ್ ಹಾಗೂ ಪಾಲಂದಿರ ಜೋಯಪ್ಪ ಈ ಸಂದರ್ಭ ಹಾಜರಿದ್ದರು.
::: ನಾಚಪ್ಪ ವಿಶ್ವಾಸ :::
ಪ್ರತ್ಯೇಕವಾಗಿದ್ದ ಕೊಡವ ಪ್ರದೇಶ ಕೂರ್ಗ್ 1956 ರ ರಾಜ್ಯ ಮರು-ಸಂಘಟನೆ ಕಾಯಿದೆ ಜಾರಿಗೆ ಬಂದ ನಂತರ, ವಿಶಾಲ ಮೈಸೂರಿನೊಂದಿಗೆ (ಈಗಿನ ಕರ್ನಾಟಕ) ವಿಲೀನಗೊಂಡಿತು. ಈ ಅವೈಜ್ಞಾನಿಕ ರಾಜಕೀಯ ಪ್ರಮಾದದಲ್ಲಿ ಕೊಡವರು ತಮ್ಮ ಅಸ್ಮಿತೆ ಮತ್ತು ಅಸ್ತಿತ್ವವನ್ನು ಕಳೆದುಕೊಂಡರು.
ಕೊಡವರು ಸಂಖ್ಯಾತ್ಮಕವಾಗಿ ಚಿಕ್ಕ ಸೂಕ್ಷ್ಮ ಸಮುದಾಯವಾಗಿದ್ದು, ಸಂವಿಧಾನದ ಅಡಿಯಲ್ಲಿ ರಾಜಕೀಯ ಕ್ಷೇತ್ರದಲ್ಲಿ ಜಾಗವನ್ನು ಹುಡುಕುತ್ತಿದ್ದಾರೆ. ಇದಕ್ಕಾಗಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಶಾಂತಿಯುತ ಹೋರಾಟವನ್ನು ಮುಂದುವರೆಸಿದೆ, ಕಾನೂನು ಹೋರಾಟಕ್ಕೆ ಜಯ ಸಿಗಲಿದೆ ಎಂದು ನಾಚಪ್ಪ ಇದೇ ಸಂದರ್ಭ ವಿಶ್ವಾಸ ವ್ಯಕ್ತಪಡಿಸಿದರು.
Breaking News
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*
- *ಕೊಡಗು : ಫೆ.13 ರವರೆಗೆ “ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ”*
- *ಒಳಮೀಸಲಾತಿ ಶೀಘ್ರ ಜಾರಿಗೆ ತರಲು ದಲಿತ ಸಂಘರ್ಷ ಸಮಿತಿ ಆಗ್ರಹ*
- *ಮೂರ್ನಾಡು ಗಜಾನನ ಯುವಕ ಸಂಘ ಖಂಡನೆ*
- *ಅಮಾಯಕರ ಮೇಲಿನ ಹಲ್ಲೆ ಖಂಡನೀಯ : ಮೂರ್ನಾಡು ಆಪ್ತಮಿತ್ರ ಬಳಗ ಅಸಮಾಧಾನ*
- *ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದಿಂದ ಸಂಭ್ರಮದ ಪುತ್ತರಿ ಒತ್ತೋರ್ಮೆ ಕೂಟ*