ಮಡಿಕೇರಿ ಸೆ.5 : ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯು ಸೆಪ್ಟೆಂಬರ್, 8 ರಂದು ಬೆಳಗ್ಗೆ 11 ಗಂಟೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಚೇರಿ ಆವರಣದಲ್ಲಿ ನಡೆಯಲಿದೆ.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರ ನೇತೃತ್ವದಲ್ಲಿ ಸಾಕ್ಷರ ಧ್ವಜಾರೋಹಣ ಮತ್ತು ಸಾಕ್ಷರತಾ ಪ್ರಮಾಣ ವಚನದ ಮೂಲಕ ನೆರವೇರಿಸಲಾಗುವುದು ಎಂದು ಕೊಡಗು ಜಿಲ್ಲಾ ಪಂಚಾಯತ್ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.







