ಮಡಿಕೇರಿ ಸೆ.6 : ಶ್ರೀ ಕಂಚಿ ಕಾಮಾಕ್ಷಿ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರತೀ ವರ್ಷದಂತೆ ಈ ಬಾರಿಯೂ ತಾ.6 ರಂದು (ಇಂದು) ದೇವಾಲಯದಲ್ಲಿ ನಡೆಯಲಿದೆ.
ಇಂದು (ಬುಧವಾರ) ರಾತ್ರಿ 10 ಗಂಟೆಯಿಂದ ಶ್ರೀ ರಾಮಾಂಜನೇಯ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ 12 ಗಂಟೆಗೆ ಮಹಾಪೂಜೆ ನೆರವೇರಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ಕೃಷ್ಣ ಆರಾಧನೆಯಲ್ಲಿ ಪಾಲ್ಗೊಳ್ಳುವಂತೆ ದೇವಾಲಯದ ಆಡಳಿತ ಮಂಡಳಿ ಕೋರಿದೆ.