ನಾಪೋಕ್ಲು ಸೆ.6 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ವತಿಯಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಕುರಿತು ಅರಿವು ಮೂಡಿಸುವ ಸಲುವಾಗಿ “ಸ್ವಾಸ್ಥ್ಯ ಸಂಕಲ್ಪ” ಕಾರ್ಯಕ್ರಮ ನಡೆಯಿತು.
ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಕಾರ್ಯಕ್ರವನ್ನು ಸ್ಥಳೀಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಉದ್ಘಾಟಿಸಿ, ದುಶ್ಚಟಗಳಿಂದ ಸಮಾಜದಲ್ಲಿ ಆಗುವ ಸಾಧಕ ಬಾಧಕ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ಕೊಡಗು ಜಿಲ್ಲಾ ಜನ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಧನಂಜಯ ಅಗೋಳಿಕಜೆ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದರು.
ಈ ಸಂದರ್ಭ ಗ್ರಾಮಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪುರುಷೋತ್ತಮ, ನಾಪೋಕ್ಲು ಗ್ರಾ.ಪಂ ಉಪಾಧ್ಯಕ್ಷ ಕುಲ್ಲೇಟಿರ ಹೇಮಾವತಿ ಅರುಣ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಎ.ಹಾರಿಸ್, ಕಾಲೇಜು ಪ್ರಭಾರ ಪ್ರಾಂಶುಪಾಲ ವಿಜಿತಾ, ಮೇಲ್ವಿಚಾರಕರಾದ ಸುನಿಲ್, ಸೇವಾ ಪ್ರತಿನಿಧಿ ಉಮಾಲಕ್ಷ್ಮಿ, ಗೀತಾ, ಪವಿತಾ ಸದಸ್ಯೆ ಪೊನ್ನಮ್ಮ, ಕಾಲೇಜು ಬೋಧಕರು, ವಿದ್ಯಾರ್ಥಿ ವೃಂದ ಹಾಜರಿದ್ದರು.
ವರದಿ : ದುಗ್ಗಳ ಸದಾನಂದ