ಸುಂಟಿಕೊಪ್ಪ ಸೆ.6 : ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ತಾಲ್ಲೂಕು ಮಟ್ಟದ ಬಾಸ್ಕೆಟ್‍ಬಾಲ್ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪದ ಸಂತ ಮೇರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಕುಶಾಲನರ ತಾಲೂಕಿನ ಕೂಡಿಗೆ ಮೋರಾರ್ಜಿ ದೇಸಾಯಿ ಶಾಲಾ ಮೈದಾನದಲ್ಲಿ ನಡೆದ ತಾಲ್ಲೂಕು ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಪ್ರಾಥಮಿಕ ವಿಭಾಗದ ಬಾಲಕರ ಬಾಸ್ಕೆಟ್ ಬಾಲ್ ಫೈನಲ್ ಪಂದ್ಯದಲ್ಲಿ ಕೂಡಿಗೆ ಮೊರಾರ್ಜಿ ದೇಸಾಯಿ ಪ್ರಾಥಮಿಕ ಶಾಲೆಯನ್ನು ಸುಂಟಿಕೊಪ್ಪ ಸಂತ ಮೇರಿ ತಂಡವು 10-2 ಪಾಯಿಂಟ್ ಗಳಿಂದ ಸೋಲಿಸುವ ಮೂಲಕ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದೆ.
ಪ್ರೌಢಶಾಲಾ ಬಾಲಕರ ಬಾಸ್ಕೆಟ್‍ಬಾಲ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿರುದ್ಧ 14-06 ಅಂಕಗಳಿಗೆ ಸೋಲಿಸಿ ಪ್ರಥಮ ಸ್ಥಾನ ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಪಂದ್ಯಾವಳಿಯಲ್ಲಿ ಈ ತಂಡಗಳು ಪಾಲ್ಗೊಳ್ಳಲಿದೆ.
ಸಂಸ್ಥೆಯ ಮುಖ್ಯಸ್ಥರಾದ ರೆ.ಫಾ.ಅರುಳ್ ಸೆಲ್ವಕುಮಾರ್, ಮುಖ್ಯೋಪಾದ್ಯಾಯರಾದ ಸೇಲ್ವರಾಜ್, ದೈಹಿಕ ಶಿಕ್ಷಣ ಶಿಕ್ಷಕ ಬಿ.ಎಂ.ಚಂದ್ರಶೇಖರ್ ಮತ್ತು ಸಹ ಶಿಕ್ಷಕರು ವಿದ್ಯಾರ್ಥಿಗಳ ಸಾಧನೆಗೆ ಪ್ರಶಾಂಸೆ ವ್ಯಕ್ತಪಡಿಸಿದ್ದಾರೆ.