ಮಡಿಕೇರಿ ಸೆ.6 : ಅರಂತೋಡು ಗ್ರಾಮದ ಬಿಳಿಯಾರು ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣ ಸಮಿತಿ ವತಿಯಿಂದ ಶ್ರದ್ಧಾಭಕ್ತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.
ಬಿಳಿಯಾರು ಶಾಲಾ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ ಉದ್ಘಾಟಿಸಿದರು.
ಸಮಿತಿಯ ಅಧ್ಯಕ್ಷ ಮಂಜುನಾಥ ಬಿಳಿಯಾರು ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ ಪ್ರಾಂಶುಪಾಲ ಕೆ.ಆರ್.ಗಂಗಾಧರ್, ನಿವೃತ ಪೋಲಿಸ್ ಪದ್ಮಯ್ಯ ಪೂಜಾರಿಮನೆ, ಜನಪ್ರಕಾಶ್, ಸುಳ್ಯ ತಾಲ್ಲೂಕು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸೋಮಶೇಖರ್ ಪೈಕ, ಮಹೇಶ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಕೆ.ಪಿ.ಕುಸುಮಾದರ ಸ್ವಾಗತಿಸಿ, ಆನಂದ ಬಿಳಿಯಾರು ಕಾರ್ಯಕ್ರಮ ನಿರೂಪಿಸಿದರು.