ಮಡಿಕೇರಿ ಸೆ.6 : ಶ್ರೀ ಕಂಚಿ ಕಾಮಾಕ್ಷಿ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ. 10 ರಂದು “ಮೊಸರು ಕುಡಿಕೆ ಒಡೆಯುವ ಸ್ಪರ್ಧೆ” ನಡೆಯಲಿದೆ.
ಅಂದು ಸಂಜೆ 4 ಗಂಟೆಗೆ ದೇವಾಲಯದ ಆವರಣದಲ್ಲಿ ಮೊಸರು ಕುಡಿಕೆ ಒಡೆಯುವ ಸ್ಪರ್ಧೆ ಹಾಗೂ 5 ವರ್ಷ ದೊಳಗಿನ ಮಕ್ಕಳಿಗೆ ಛದ್ಮ ವೇಷ ಸ್ಪರ್ಧೆ ಏರ್ಪಡಿಸಲಾಗಿದೆ.
ಛದ್ಮ ವೇಷ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಮಕ್ಕಳು ದೂರವಾಣಿ ಸಂಖ್ಯೆ 9482037525, 9449696355 ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಸಾರ್ವಜನಿಕರು ದೇವಾಲಯದಲ್ಲಿ ನಡೆಯುವ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂದು ಆಡಳಿತ ಮಂಡಳಿ ಕೋರಿದೆ.