ಮಡಿಕೇರಿ ಸೆ.6 : ಕೊಡಗು ಗೌಡ ವಿದ್ಯಾ ಸಂಘದ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ಗೌಡ ಜನಾಂಗದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಸೆ.28 ರಂದು ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಅಂಬೆಕಲ್ ನವೀನ್ ಹಾಗೂ ಕಾರ್ಯದರ್ಶಿ ಪೇರಿಯನ ಕೆ.ಉದಯ ಕುಮಾರ್, ಅಂದು ಬೆಳಗ್ಗೆ 10 ಗಂಟೆಗೆ ನಗರದ ಗೌಡ ವಿದ್ಯಾ ಸಂಘದ ಸಂಭಾಗಣದಲ್ಲಿ ವಿವಿಧ ಸ್ಪರ್ಧೆಗಳು ನಡೆಯಲಿದೆ ಎಂದು ತಿಳಿಸಿದ್ದಾರೆ.
ಎಲ್‍ಕೆಜಿ ಯಿಂದ 1ನೇ ತರಗತಿ ವಿದ್ಯಾರ್ಥಿಗಳಿಗೆ ಛದ್ಮವೇಷ, 2ರಿಂದ 4ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ ಚಿತ್ರಕಲೆ ಸ್ಪರ್ಧೆ (ವಿದ್ಯಾ ಸಂಘದ ಕಟ್ಟಡವನ್ನು ಚಿತ್ರಿಸುವುದು), 5ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ “ಗೌಡ ಮನೆತನದ ಹೆಸರು” ಹೇಳುವ ಸ್ಪರ್ಧೆ ನಡೆಯಲಿದೆ.
8ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ “ಗೌಡ ಸಂಸ್ಕೃತಿ”ಯ ಬಗ್ಗೆ ಪ್ರಬಂಧ (ಎರಡು ಪುಟಗಳಿಗೆ ಮೀರದಂತೆ), ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ “ಸ್ವಾತಂತ್ರ್ಯ ಹೋರಾಟದಲ್ಲಿ ಎಲ್ಲಾ ಅರೆಭಾಷೆ ಗೌಡರ ಪಾತ್ರ” (ಎರಡು ಪುಟಗಳು ಮೀರದಂತೆ) ಸ್ಪರ್ಧೆ ಏರ್ಪಡಿಸಲಾಗಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ಮಕ್ಕಳ ಪೋಷಕರಿಗೆ ಮಾತ್ರ “ಅರೆಭಾಷೆ ಹಾಡುಗಳ ಸ್ಪರ್ಧೆ ನಡೆಯಲಿದೆ. ಆಸಕ್ತರು ಸೆ.28 ರಂದು ಬೆಳಗ್ಗೆ 9.30 ಗಂಟೆಯೊಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ನವೀನ್ ಹಾಗೂ ಉದಯ ಕುಮಾರ್ ತಿಳಿಸಿದ್ದಾರೆ.
ಜಿಲ್ಲೆಯ ವಿವಿಧೆಡೆಗಳಿಂದ ಸ್ಪರ್ಧೆಗಾಗಿ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗೆ ಸಂಘದ ಕಾರ್ಯದರ್ಶಿ ಪೇರಿಯನ ಕೆ.ಉದಯಕುಮಾರ್ 81972 97516 ನ್ನು ಸಂಪರ್ಕಿಸಬಹುದಾಗಿದೆ.









