ಮಡಿಕೇರಿ ಸೆ.6 : ಮಡಿಕೇರಿ ವಿದ್ಯುತ್ ಉಪ ಕೇಂದ್ರ 66/11 ಕೆವಿ ಯಿಂದ ಹೊರ ಹೋಗುವ ಎಫ್ 12 ರಾಜಾಸೀಟು ಫೀಡರ್‍ನಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಸೆ.7 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ರಾಜಾಸೀಟು, ಇಂದಿರಾಗಾಂಧಿ, ಚಾಮುಂಡೇಶ್ವರಿನಗರ, ರೇಸ್‍ಕೋರ್ಸ್ ರಸ್ತೆ, ಹೊಸ ಬಡಾವಣೆ, ಮುಳಿಯ, ವಿದ್ಯಾನಗರ, ಎಫ್‍ಎಂಸಿ ಕಾಲೇಜು ಹಾಗೂ ಸುತ್ತಮುತ್ತಲ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ತಿಳಿಸಿದ್ದಾರೆ.










