ಮಡಿಕೇರಿ ಸೆ.7 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಮಾರಂಭ ಸೆ.16 ರಂದು ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ ಆಯೋಜಿಸಲಾಗಿದೆ ಎಂದು ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 6 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ತಿಳಿಸಿದರು.
ಕೊಡಗು ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಸನ್ಮಾನಿಸಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್‍ನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ 1 ಕೋಟಿ ರೂಪಾಯಿ ಮೊತ್ತದ ಕ್ಷೇಮ ನಿಧಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಚಾಲನೆ ನೀಡಲಿದ್ದಾರೆ. ಸಂಸದ ಪ್ರತಾಪ್ ಸಿಂಹ ಕೊಡಗಿನ ಹಿರಿಯ ಪತ್ರಕರ್ತರನ್ನು ಸನ್ಮಾನಿಸಲಿದ್ದಾರೆ.
ಬೆಳ್ಳಿ ಮಹೋತ್ಸವ ಪ್ರಯುಕ್ತ ಹೊರತಲಾರುತ್ತಿರುವ ಸ್ಮರಣ ಸಂಚಿಕೆ ಪಿಂಜರಿಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ಶಿವಾನಂದ ತಗಡೂರು ಅನಾವರಣ ಮಾಡಲಿದ್ದಾರೆ. ಕೊಡಗು ಪ್ರೆಸ್ ಕ್ಲಬ್ ಸೌಹಾರ್ದ ಸಹಕಾರಿ ನಿಯಮಿತದ ಲಾಂಛನವನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅನಾವರಣ ಮಾಡಲಿದ್ದಾರೆ. ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಉಪಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ತ್ಯಾಗರಾಜ್, ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕ ಜಿ.ರಾಜೇಂದ್ರ, ಗೌರವಾಧ್ಯಕ್ಷೆ ಬಿ.ಆರ್. ಸವಿತಾ ರೈ ಪಾಲ್ಗೊಳ್ಳಲಿದ್ದಾರೆ.
ಜೀವನ್ ಚಿಣ್ಣಪ್ಪ, ಎಚ್.ಟಿ. ಅನಿಲ್, ಡಾ.ಉಳ್ಳಿಯಡ ಎಂ. ಪೂವಯ್ಯ, ಜಗದೀಶ್ ಬೆಳ್ಯಪ್ಪ, ಜಿ.ರಾಜೇಂದ್ರ, ಬಿ.ಜಿ. ಅನಂತಶಯನ, ಅಜ್ಜಿನಿಕಂಡ ಮಹೇಶ್ ನಾಚಯ್ಯ, ಜಿ.ಚಿದ್ವಿಲಾಸ್, ಡಾಟಿ ಪೂವಯ್ಯ ಅವರನ್ನು ಸನ್ಮಾನಿಸಲಾಗುತ್ತದೆ.
ಕೊಡಗು ಪ್ರೆಸ್ ಕ್ಲಬ್ ಸದಸ್ಯರು ಹಾಗೂ ಕುಟುಂಬಸ್ಥರಿಗೆ ಮನರಂಜನಾ ಕ್ರೀಡಾ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷೆ ಬಿ.ಆರ್. ಸವಿತಾ ರೈ ಅಧ್ಯಕ್ಷತೆಯಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವೆಂಕಟ್ ರಾಜಾ ಉದ್ಘಾಟಿಸಲಿದ್ದಾರೆ.
ಮುಖ್ಯಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ವರ್ಣೀತ್ ನೇಗಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 1.30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದೆ. ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಮಹಾಪೋಷಕರಾದ ಜಿ.ರಾಜೇಂದ್ರ ಅಧ್ಯಕ್ಷತೆ ವಹಿಸಲಿದ್ದು, ವಿಧಾನಸಭೆ ಮಾಜಿ ಅಧ್ಯಕ್ಷ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ಮುಖ್ಯಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಉದ್ಯಮಿ ನಾಪಂಡ ಎಂ. ಮುದ್ದಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಪಾಲ್ಗೊಳ್ಳಲಿದ್ದಾರೆ.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್‍ಕುಮಾರ್, ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ ಉಪಸ್ಥಿತರಿರುತ್ತಾರೆ.
ಕರ್ನಾಟಕ ಜಾನಪದ ಪರಿಷತ್ ಕೊಡಗು ಜಿಲ್ಲಾ ಘಟಕ, ಮಡಿಕೇರಿಯ ಕಿಂಗ್ಸ್ ಆಫ್ ಕೂರ್ಗ್ ಡ್ಯಾನ್ಸ್ ಇನ್ಸಿಟ್ಯೂಟ್ಸಿನ್, ನಾಟ್ಯಾಲಯ ಡ್ಯಾನ್ಸ್ ಸ್ಟುಡಿಯೋ, ಗುರುಕುಲ ಕಲಾಮಂಡಳಿಯ ಸ್ಕೂಲ್ ಪರ್ಫಾಮಿರ್ಂಗ್ ಆಟ್ಸ್, ಕೊಡವ ಸಮಾಜ ಪೊಮ್ಮಕ್ಕಡ ಕೂಟ, ಕಲಾ ಕಾವ್ಯ ನಾಟ್ಯ ಶಾಲೆ, ಕುಶಾಲನಗರದ ಏಂಜಲ್ಸ್ ವಿಂಗ್ಸ್ ಸ್ಕೂಲ್ ಆಫ್ ಡ್ಯಾನ್ಸ್ ಹಾಗೂ ಭಾಗಮಂಡಲದ ಅಭಿನಯ ಕಲಾ ಮಿಲನ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಕನ್ನಡ ಮತ್ತುಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮ ಆಯೋಜಿಸ ಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಗೌರವಾಧ್ಯಕ್ಷೆ ಬಿ.ಆರ್. ಸವಿತಾ ರೈ, ಖಜಾಂಚಿ ಬೊಳ್ಳಜೀರ ಬಿ. ಅಯ್ಯಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್‍ಕುಮಾರ್, ಕಾರ್ಯದರ್ಶಿ ಬಾಚರಣಿಯಂಡ ಅನು ಕಾರ್ಯಪ್ಪ, ಪ್ರೆಸ್ ಕ್ಲಬ್ ಉಪಾಧ್ಯಕ್ಷರಾದ ಚೀಯಂಡಿ ತೇಜಸ್ ಪಾಪಯ್ಯ ಹಾಜರಿದ್ದರು.