ಮಡಿಕೇರಿ ಸೆ.7 : 1965ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ವೀರ ಮರಣ ಹೊಂದಿದ ಮಹಾವೀರ ಚಕ್ರ (ಮರಣೋತ್ತರ) ಪುರಸ್ಕೃತ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ.ದೇವಯ್ಯ ಅವರ 58ನೇ ಪುಣ್ಯಸ್ಮರಣೆಯನ್ನು ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೊಡವ ಮಕ್ಕಡ ಕೂಟ ಹಾಗೂ ಅಜ್ಜಮಾಡ ಒಕ್ಕ (ಕುಟುಂಬಸ್ಥರ) ಸಹಯೋಗದಲ್ಲಿ ನಗರದ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ವೃತ್ತದಲ್ಲಿ ಜನಪ್ರತಿನಿಧಿಗಳು, ನಿವೃತ್ತ ಯೋಧರು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಹಾಗೂ ಸಾರ್ವಜನಿಕರು ದೇವಯ್ಯ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.
ಈ ಸಂದರ್ಭ ಮಾತನಾಡಿದ ಏರ್ ಮಾರ್ಷಲ್ (ನಿವೃತ್ತ) ಕೊಡಂದೇರ ನಂದಾ ಕಾರ್ಯಪ್ಪ, ವೀರ ಸೇನಾನಿ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ಅವರು ದೇಶ ರಕ್ಷಣೆಯ ಮೂಲಕ ಯುವ ಪೀಳಿಗೆಗೆ ಮಾದರಿಯಾಗಿದ್ದಾರೆ. ಅಜ್ಜಮಾಡ ಬಿ.ದೇವಯ್ಯ ಹಾಗೂ ಕರ್ನಲ್ ಪುಟ್ಟಿಚಂಡ ಎಸ್. ಗಣಪತಿ ಅವರಿಗೆ ಮಹಾವೀರ ಚಕ್ರ ಪ್ರಶಸ್ತಿ ದೊರೆತ್ತಿದೆ. ಆ ಮೂಲಕ ಕೊಡಗು ಜಿಲ್ಲೆಗೆ ಎರಡು ಮಹಾವೀರ ಚಕ್ರ ಪ್ರಶಸ್ತಿ ದೊರೆತಂತ್ತಾಗಿದೆ. ಇಬ್ಬರು ಯೋಧರು ದಕ್ಷತೆ ಮತ್ತು ಶೌರ್ಯಕ್ಕೆ ಹೆಸರುವಾಸಿಯಾಗಿದ್ದಾರೆ. ಇವರ ಆದರ್ಶವನ್ನು ಯುವ ಸಮೂಹ ಮೈಗೂಡಿಸಿಕೊಳ್ಳಬೇಕು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಸೇರುವ ಮೂಲಕ ದೇಶಸೇವೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ಅಜ್ಜಮಾಡ ಬಿ.ದೇವಯ್ಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಕಟ್ಟಿ ಮಂದಯ್ಯ ಮಾತನಾಡಿ ದೇಶ ಕಂಡ ಅಪ್ರತಿಮ ವೀರ ಸ್ವಾ.ಲೀ ಅಜ್ಜಮಾಡ ಬಿ.ದೇವಯ್ಯ ಅವರ 58ನೇ ಪುಣ್ಯಸ್ಮರಣೆ ಆಚರಿಸುತ್ತಿರುವುದು ಹೆಮ್ಮೆಯ ವಿಚಾರ. ತಮ್ಮ 32ನೇ ವಯಸ್ಸಿನಲ್ಲೇ ಅಜ್ಜಮಾಡ ಬಿ.ದೇವಯ್ಯ ಅವರು ಕುಟುಂಬದ ಬಗ್ಗೆ ಚಿಂತಿಸದೆ ದೇಶದ ರಕ್ಷಣೆಗಾಗಿ ಜೀವ ನೀಡಿದ್ದಾರೆ. ಅವರ ತ್ಯಾಗ ಬಲಿದಾನ ಅವಿಸ್ಮರಣೀಯ, ಮಹಾವೀರ ಚಕ್ರ ಪುರಸ್ಕೃತರಾಗಿರುವ ದೇವಯ್ಯ ಅವರನ್ನು ಸದಾ ಸ್ಮರಿಸುವಂತಾಗಬೇಕು ಎಂದರು.
ಇತ್ತೀಚೆಗೆ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಹಾನಿಯಾಗಿದ್ದು, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಶ್ರಮದಿಂದ ದುರಸ್ತಿ ಕಾರ್ಯ ಶೀಘ್ರವಾಗಿ ನಡೆದಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆ ನಡೆಯದಂತೆ ಎಚ್ಚರ ವಹಿಸಬೇಕು ಎಂದರು.
ವಾಯುಪಡೆಯ ನಿವೃತ್ತ ಯೋಧ ಬಾಳೆಯಡ ಶಂಭು ಮಾತನಾಡಿ, ಸ್ಕಾ÷್ವ.ಲೀ ಅಜ್ಜಮಾಡ ದೇವಯ್ಯ ಅವರು, ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಬಲಿದಾನ ಮಾಡಿದ್ದು, ಅವರ ಶೌರ್ಯ, ವೀರತ್ವ, ಹೋರಾಟದ ಚಾಕ ಚಕ್ಯತೆ ಅತ್ಯುನ್ನತವಾಗಿತ್ತು ಎಂದು ಸ್ಮರಿಸಿದರು.
ದೇವಯ್ಯ ಅವರ ವೃತ್ತವನ್ನು ಸ್ಥಾಪಿಸುವ ಮೂಲಕ ವೀರಸೇನಾನಿಯ ಹೆಸರು ಚಿರಸ್ಥಾಯಿಗೊಳಿಸಲಾಗಿದೆ, ಯುವ ಸಮೂಹಕ್ಕೆ ಸ್ಫೂರ್ತಿಯಾಗಿರುವ ಪ್ರತಿಮೆಯನ್ನು ಸಂರಕ್ಷಿಸುವ ಕಾರ್ಯ ಆಗಬೇಕಾಗಿದೆ ಎಂದರು.
ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಗರಸಭಾ ಅಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್, ನಿವೃತ್ತ ಯೋಧರಾದ ಮುಂಜಾಂದಿರ ರಾಜ ಅಪ್ಪಯ್ಯ, ಎಂ.ಕೆ.ಅಚ್ಚಯ್ಯ, ಬೊಟ್ಟಂಗಡ ಜಪ್ಪು, ಅಜ್ಜಮಾಡ ಒಕ್ಕದ ಖಜಾಂಚಿ ಚಂಗಪ್ಪ, ಕುಟುಂಬದ ಪ್ರಮುಖರಾದ ಬೆಳ್ಯಪ್ಪ, ಕಾರ್ಯಪ್ಪ, ಮಹೇಶ್, ಬಾಲಕೃಷ್ಣ, ಸುರೇಶ್, ಪವನ್, ನಂಜಪ್ಪ, ಕೊಡವ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಉಳ್ಳಿಯಡ ಎಂ.ಪೂವಯ್ಯ, ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರೀರ ಕರುಣ್ ಕಾಳಯ್ಯ, ಮಡಿಕೇರಿ ಸಮಿತಿ ಕಾರ್ಯದರ್ಶಿ ಅಜ್ಜಮಕ್ಕಡ ವಿನುಕುಶಾಲಪ್ಪ, ಕಾಂಗ್ರೆಸ್ ಮಹಿಳಾ ಘಟಕದ ನಗರಾಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ನಿವೃತ್ತ ಯೋಧರು, ಅಜ್ಜಮಾಡ ಕುಟುಂಬಸ್ಥರು, ಕೊಡವ ಮಕ್ಕಡ ಕೂಟದ ಸದಸ್ಯರು ಹಾಜರಿದ್ದು ಪುಷ್ಪನಮನ ಸಲ್ಲಿಸಿದರು.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*