ಮಡಿಕೇರಿ ಸೆ.7 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆಯ ವರ್ಷಾಚರಣೆಯನ್ನು ಸೆ.8 ರಂದು ಮಡಿಕೇರಿಯಲ್ಲಿ ಆಚರಿಸಲಾಗುವುದು ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿಯಿಂದ ಗಾಂಧಿ ಮಂಟಪದ ವರೆಗೆ ಮೆರವಣಿಗೆ ನಡೆಸಲಾಗುವುದು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಪಕ್ಷದ ಎಲ್ಲಾ ಹಿರಿಯ ಮುಖಂಡರು, ಮಾಜಿ ಶಾಸಕರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಡಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕ/ಸೆಲ್ ಗಳ ಅಧ್ಯಕ್ಷರುಗಳು, ಚುನಾಯಿತ ಜನಪ್ರತಿನಿಧಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










