ಮಡಿಕೇರಿ ಸೆ.7 : ಮಾದಕ ವಸ್ತು ಮಾರಾಟ ಮಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಕೊಡಗು ಜಿಲ್ಲಾ ಪೊಲಿಸರು, ಆರೋಪಿಗಳಿಂದ 157 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಮೊಣ್ಣಂಗೇರಿ ಗ್ರಾಮದ ಎಂ.ಸಚಿನ್(24), ಮಡಿಕೇರಿ ಇಂದಿರಾನಗರದ ಹೆಚ್.ಎ.ಲೋಕೇಶ್ (22) ಎಂಬುವವರೇ ಬಂಧಿತ ಆರೋಪಿಗಳು.
ಮಡಿಕೇರಿ ಹೊಸ ಖಾಸಗಿ ಬಸ್ ನಿಲ್ದಾಣದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಆರೋಪಿಗಳಿಂದ 157 ಗ್ರಾಂ ಗಾಂಜಾವನ್ನು ಮಾದಕ ವಸ್ತುವಿನೊಂದಿಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ವಿರಾಜಪೇಟೆ ಉಪ ವಿಭಾಗದ ಡಿವೈಎಸ್‍ಪಿ ಆರ್. ಮೋಹನ್ ಕುಮಾರ್, ಮಡಿಕೇರಿ ನಗರ ವೃತ್ತದ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಮಡಿಕೇರಿ ನಗರ ಠಾಣೆಯ ಎಸ್‍ಐಗಳಾದ ಶ್ರೀನಿವಾಸ್ ಮತ್ತು ರಾಧಾ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪ್ರಕರಣದಲ್ಲಿ ಕಾರ್ಯನಿರ್ವಹಿಸಿದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಶ್ಲಾಘಿಸಿದ್ದಾರೆ.
:: ಮಾಹಿತಿ ನೀಡಿ ::: ಯುವಕ-ಯುವತಿಯರು ಮಾದಕ ವ್ಯಸನಿಗಳಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುವುದನ್ನು ತಡೆಗಟ್ಟುವ ಸಲುವಾಗಿ ಮಾದಕ ವಸ್ತುಗಳನ್ನು ಬಳಸುವ ಹಾಗೂ ಮಾರಾಟ ಮಾಡುವ ವ್ಯಕ್ತಿಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡುವಂತೆ ಹಾಗೂ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತ್ತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ ಎಂದು ಎಸ್‍ಪಿ ಮನವಿ ಮಾಡಿದ್ದಾರೆ.








