ನಾಪೋಕ್ಲು ಸೆ.9 : ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣ ನೀಡುವುದು ಮಾತ್ರವಲ್ಲ. ಅವರನ್ನು ಆದರ್ಶ ನಾಗರಿಕರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ನಿವೃತ್ತ ಶಿಕ್ಷಕ ಎ.ಜಿ.ಗಣೇಶ್ ಹೇಳಿದರು.
ಮೂರ್ನಾಡು ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚಿಟ್ಟಿರ ಮಾದಪ್ಪ ಮಾತನಾಡಿ, ಶಿಕ್ಷಕರ ಸ್ಥಾನ ಅತ್ಯಂತ ಪವಿತ್ರವಾದದ್ದು. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದರು.
ಮುರ್ನಾಡು ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ವೇಣು ಅಪ್ಪಣ್ಣ, ಖಜಾಂಚಿ ಸುಬ್ರಮಣಿ, ಪ್ರಾಂಶುಪಾಲರಾದ ದೇವಕ್ಕಿ, ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಧಮಯಂತಿ ಪಾಲ್ಗೊಂಡಿದ್ದರು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.