ಮಡಿಕೇರಿ ಸೆ.8 : ಗೋಣಿಕೊಪ್ಪ ಕಾವೇರಿ ದಸರಾ ಸಮಿತಿ ಅಧ್ಯಕ್ಷರಾಗಿ ಕುಲ್ಲಚಂಡ ಪ್ರಮೋದ್ ಗಣಪತಿ ಆಯ್ಕೆಯಾಗಿದ್ದಾರೆ.
ಗೋಣಿಕೊಪ್ಪ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಬಾಲು ಅಧ್ಯಕ್ಷತೆಯಲ್ಲಿ ನಡೆದ ದಸರಾ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಶಾಸಕ ಎ.ಎಸ್.ಪೊನ್ನಣ್ಣ ಸಹಕಾರದೊಂದಿಗೆ ಅದ್ದೂರಿ ದಸರಾ ಉತ್ಸವಕ್ಕೆ ಸಭೆಯಲ್ಲಿ ನಿರ್ಧರಿಸಲಾಯಿತು.









