ಮಡಿಕೇರಿ ಸೆ.8 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ಸೆ.10 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಆಚರಿಸಲಾಗುವುದು. ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಲಾಗುವುದು ಎಂದು ದಸಂಸಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ತಿಳಿಸಿದ್ದಾರೆ.
ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಹೆಚ್.ವಿ.ದೇವದಾಸ್ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಕೊಡಗು ವೈದ್ಯಕೀಯ ವಿಭಾಗ ಸಂಸ್ಥೆ ಮತ್ತು ಭೋದಕ ಆಸ್ಪತ್ರೆಯ ಸ್ಥಾನೀಯ ವೈದ್ಯಾಧಿಕಾರಿ ಡಾ.ಸತೀಶ್ ಪಾಲ್ಗೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸ್ತ್ರೀರೋಗ ತಜ್ಞೆ ಡಾ.ಸೌಮ್ಯ ಪ್ರಕಾಶ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಲ್ಯಾಣಾಧಿಕಾರಿ ಹೆಚ್.ಎ.ಮೋಹನ್, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ, ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ, ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ಡಿ.ಜೆ.ಈರಪ್ಪ, ಹೆಚ್.ಎಸ್.ಗಣೇಶ್, ದಲಿತ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಹೆಚ್.ಬಿ.ಸಂತೋಷ್ ಕುಮಾರ್, ಮಡಿಕೇರಿ ನಗರ ಸಂಚಾಲಕ ಸಿ.ಪಿ.ಸಿದ್ದೇಶ್ವರ್ ಹಾಗೂ ಸಂಘಟನಾ ಸಂಚಾಲಕ ಲೋಕನಾಥ್ ಭಾಗವಹಿಸಲಿದ್ದಾರೆ.
::: ಸನ್ಮಾನ :::
ಕಾರ್ಯಕ್ರಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು. ಅಲ್ಲದೆ ನಗರದ ಸ್ತ್ರೀ ಶಕ್ತಿ ವೃದ್ಧಾಶ್ರಮದ ಸಂಧ್ಯಾಕಾಲದ ಬಂಧುಗಳಿಗೆ ಬಟ್ಟೆ ಹಾಗೂ ನಗರಸಭೆಯ 70 ಮಂದಿ ಪೌರ ಕಾರ್ಮಿಕರಿಗೆ ಸ್ವೆಟರ್ ವಿತರಿಸಲಾಗುವುದು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*