ಮಡಿಕೇರಿ ಸೆ.8 : ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.10 ರಂದು ನಡೆಯಲಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಸಂಘದ ಅಧ್ಯಕ್ಷ ಹೆಚ್.ಎಸ್.ಚೇತನ್, ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಸಭೆಯಲ್ಲಿ ಸದಸ್ಯರ ಮಕ್ಕಳಿಗೆ ಪತ್ರಿಭಾ ಪುರಸ್ಕಾರ, ಸಾಧಕರಿಗೆ, ಹಿರಿಯ ಸದಸ್ಯರಿಗೆ ಸನ್ಮಾನ, ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಗುವುದು ಎಂದು ಹೇಳಿದ್ದಾರೆ.
::: ರೂ.22.75 ಲಕ್ಷ ಲಾಭ :::
ಸಂಘವು ಪ್ರಸ್ತುತ 2428 ಸದಸ್ಯರನ್ನು ಹೊಂದಿದ್ದು, ಸುಮಾರು ರೂ.22,75,252.84 ಲಾಭ ಗಳಿಸಿದೆ. ರೂ.2,89,85,090 ಪಾಲು ಬಂಡವಾಳವಿದ್ದು, ಒಟ್ಟು ವ್ಯವಹಾರ ರೂ.37,22,64,501.50 ಆಗಿದೆ. ಠೇವಣಿ ರೂ.12,54,23,795.80 ಇದ್ದು, ಪ್ರಸಕ್ತ ವರ್ಷ ರೂ.8,13,23,867 ಸಾಲ ನೀಡಲಾಗಿದೆ. ಒಟ್ಟು ಸಾಲ ರೂ.14,69,27,751 ಆಗಿದ್ದು, ದುಡಿಯುವ ಬಂಡವಾಳ ರೂ.17,15,75,835 ಆಗಿದೆ. ರೂ.81,31,259 ಕ್ಷೇಮ ನಿಧಿ ಮತ್ತು ರೂ.89,03,271.40 ಇತರೆ ನಿಧಿ ಇದೆ ಎಂದು ಚೇತನ್ ಮಾಹಿತಿ ನೀಡಿದ್ದಾರೆ.
::: 19 ಕೋಟಿ ಆಸ್ತಿ :::
ಸ್ವಾಯತ್ತತೆ, ಸ್ವಯಂನಿಯಂತ್ರಣ, ಸ್ವಯಂ ಆಡಳಿತ ತತ್ವದಂತೆ ಸೌಹಾರ್ದ ಸಹಕಾರಿ ಕಾಯ್ದೆಯಡಿ ನೋಂದಾಯಿಸಲ್ಪಟ್ಟ ಕೊಡಗಿನ ಮೊಟ್ಟ ಮೊದಲ ಸಹಕಾರಿ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ಶಿಕ್ಷಕರ ಆರ್ಥಿಕ ಅವಶ್ಯಕತೆಗಳಿಗೆ ವಿವಿಧ ರೂಪದಲ್ಲಿ ಸಾಲ ನೀಡಿ ಅವರ ಪ್ರಗತಿಗೆ ಶ್ರಮಿಸುತ್ತಿದೆ. ಸ್ವಂತ ಬಂಡವಾಳದ ಮೇಲೆ ವ್ಯವಹಾರ ನಡೆಸುತ್ತಿದ್ದು, ಮಡಿಕೇರಿಯ ಮುಖ್ಯ ರಸ್ತೆಯಲ್ಲಿ ಸುಸಜ್ಜಿತ ಕಟ್ಟಡವನ್ನು ಹೊಂದಿದೆ.
ಅಲ್ಲದೆ ನಗರದ ಬ್ರಾಹ್ಮಣರ ಬೀದಿಯಲ್ಲಿ 42 ಸೆಂಟ್ ಜಾಗದಲ್ಲಿ ಗುರುಸದನ ಕಟ್ಟಡವಿದ್ದು, ಸಂಘದ ಬಳಿ ಪ್ರಸ್ತುತ ಒಟ್ಟು 19 ಕೋಟಿ ರೂ.ಮೌಲ್ಯದ ಆಸ್ತಿ ಇದೆ ಎಂದು ಅವರು ತಿಳಿಸಿದ್ದಾರೆ.
Breaking News
- *ಮಡಿಕೇರಿ ಆಟೋ ಮಾಲೀಕ-ಚಾಲಕರ ಸಂಘದ ಕುಂದು ಕೊರತೆ ಸಭೆ*
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*