ಮಡಿಕೇರಿ ಸೆ.8 : ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆಯ ವರ್ಷಾಚರಣೆಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಡಿಕೇರಿಯಲ್ಲಿ ನಡೆಸಲಾಯಿತು.
ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಲೋಕೇಶ್ ಅವರ ನೇತೃತ್ವದಲ್ಲಿ ನಗರದ ಕಾಂಗ್ರೆಸ್ ಕಚೇರಿಯಿಂದ ಗಾಂಧಿ ಮೈದಾನದವರೆಗೆ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮೆರವಣಿಗೆ ನಡೆಸಿದರು.
ಕಾಂಗ್ರೆಸ್ ಸರ್ಕಾರ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪರ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಪೂರ್ಣಗೊಂಡ ಭಾರತ್ ಜೋಡೋ ಯಾತ್ರೆಯ ಕುರಿತು ಕೆ.ಎಂ.ಲೋಕೇಶ್ ಮಾತನಾಡಿದರು.
ಕೆಪಿಸಿಸಿ ಪ್ರಮುಖ ಟಿ.ಪಿ.ರಮೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್, ಮುನೀರ್ ಅಹಮ್ಮದ್, ಉಪಾಧ್ಯಕ್ಷ ಸುಜು ತಿಮ್ಮಯ್ಯ, ನಗರಾಧ್ಯಕ್ಷ ಬಿ.ವೈ.ರಾಜೇಶ್, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಉಪಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಾಜಿ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ನಗರ ಮಹಿಳಾ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ, ಮೂಡ ಮಾಜಿ ಅಧ್ಯಕ್ಷ ಚುಮ್ಮಿ ದೇವಯ್ಯ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ, ಸೇವಾದಳದ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಬಾಷ, ಪ್ರಮುಖರಾದ ಉದಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಡಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕ/ಸೆಲ್ ಗಳ ಅಧ್ಯಕ್ಷರುಗಳು, ಚುನಾಯಿತ ಜನಪ್ರತಿನಿಧಿಗಳು, ವಲಯ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*