ಮಡಿಕೇರಿ ಸೆ.11 : ಮಡಿಕೇರಿಯ ಐತಿಹಾಸಿಕ ದಸರಾ ಉತ್ಸವಾಚರಣೆಗೆ ಪೂರ್ವಭಾವಿಯಾಗಿ ಸಾಂಪ್ರದಾಯದಂತೆ ನಗರದ ಪೇಟೆ ಶ್ರೀರಾಮಮಂದಿರದಲ್ಲಿ ದಸರಾ ಉತ್ಸವ ಸಮಿತಿಯಿಂದ ವಿಶೇಷ ಪೂಜೆ ಸಲ್ಲಿಸುವ ಮೂಲಕ ಉತ್ಸವದ ಸಿದ್ಧತಾ ಕಾರ್ಯಗಳಿಗೆ ಚಾಲನೆ ದೊರಕಿತು.
ಮಡಿಕೇರಿ ದಸರಾ ಉತ್ಸವ ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್.ಸಿ.ಸತೀಶ್, ನಗರಸಭೆ ಸದಸ್ಯ ಕೆ.ಎಸ್.ರಮೇಶ್ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಪೇಟೆ ಶ್ರೀರಾಮಮಮಂದಿರದ ಶ್ರೀ ಗಣೇಶನಿಗೆ ಮತ್ತು ಪುರಾತನ ಶ್ರೀರಾಮನ ಪಟಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ, ಉತ್ಸವದ ಯಶಸ್ಸಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನಗರಸಭೆ ಸದಸ್ಯರು, ದಶಮಂಟಪ ಸಮಿತಿಯ ಪದಾಧಿಕಾರಿಗಳು, ದಸರಾ ಉತ್ಸವ ಸಮಿತಿಯ ಮಾಜಿ ಪದಾಧಿಕಾರಿ ಹಾಗೂ ಈ ಸಂದರ್ಭ ಹಾಜರಿದ್ದರು.