ನಾಪೋಕ್ಲು ಸೆ.11 : ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಹಲವಾರು ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಪ್ರಾಥಮಿಕ ವಿಭಾಗದಲ್ಲಿ ಬಾಲಕರ ಫುಟ್ಬಾಲ್ ಪ್ರಥಮ, ಬಾಲಕಿಯರು ವಾಲಿಬಾಲ್ ಪ್ರಥಮ ಸ್ಥಾನ ಪಡೆದುಕೊಂಡಿದೆ. ಶಟಲ್ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದೆ.
ಚೆಸ್ ಪಂದ್ಯಾವಳಿಯಲ್ಲಿ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಪ್ರಥಮ , 400 ಮೀಟರ್ ರಿಲೇ ವಿಭಾಗದಲ್ಲಿ ಬಾಲಕಿಯರು ಪ್ರಥಮ, ತ್ರಿವಿಧ ಜಿಗಿತ ಪ್ರಥಮ ಸ್ಥಾನ, ಗುಂಡು ಎಸೆತ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ವಿಜೇತ ವಿದ್ಯಾರ್ಥಿಗಳಿಗೆ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬದoಜೆಟ್ಟಿರ ಗಪ್ಪಣ್ಣ ಅವರ ಮಾರ್ಗದರ್ಶನದಲ್ಲಿ ಸಹ ಶಿಕ್ಷಕರಾದ ಕಿರಣ್ ಮತ್ತು ಸುನಿಲ್ ತರಬೇತಿ ನೀಡಿದರು.
ವರದಿ : ದುಗ್ಗಳ ಸದಾನಂದ.