ಮಡಿಕೇರಿ ಸೆ.11 : ಸೋಮವಾರಪೇಟೆಯ ಶಾಸಕರ ಕಛೇರಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು. ಬಹುತೇಕ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಶಾಸಕರು ಸಕಾಲದಲ್ಲಿ ಸಾರ್ವಜನಿಕರ ಕೆಲಸ, ಕಾರ್ಯಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿರುವ ಕುರಿತು ಸಾರ್ವಜನಿಕರು ಶಾಸಕರ ಗಮನ ಸೆಳೆದರು, ಮೂಲಭೂತ ಸೌಲಭ್ಯ ಕಲ್ಪಿಸುವಂತೆ ಮನವಿ ಮಾಡಿದರು.











