ಬೆಂಗಳೂರು ಸೆ.11 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿ ನಡೆದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ವನಸಂಪತ್ತಿನ ಸಂರಕ್ಷಣೆಯ ವೇಳೆ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಮತ್ತು ವಸತಿ ಸಚಿವ ಜಮೀರ್ ಅಹಮದ್ ಈ ಸಂದರ್ಭ ಹಾಜರಿದ್ದರು.








