ಸೋಮವಾರಪೇಟೆ ಸೆ.11 : ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ತಾಲ್ಲೂಕು ರೈತ ಮೋರ್ಚಾ ಪ್ರತಿಭಟನೆ ನಡೆಸಿತು.
ಸೋಮವಾರಪೇಟೆ ತಾಲ್ಲೂಕು ಕಚೇರಿ ಎದುರು ಘೋಷಣೆಗಳನ್ನು ಕೂಗಿದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತಪರ ಯೋಜನೆಗಳನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು. ಬಿಜೆಪಿ ಸರ್ಕಾರ ನೀಡುತ್ತಿದ್ದ ಕಿಸಾನ್ ಸಮ್ಮಾನ್, ರೈತ ವಿದ್ಯಾನಿಧಿ ಯೋಜನೆ, ಭೂಸಿರಿ, ಶ್ರಮಶಕ್ತಿ ಮತ್ತು ರೈತ ಸಂಪದ ಯೋಜನೆಯನ್ನು ಮುಂದುವರೆಸಬೇಕೆoದು ಆಗ್ರಹಿಸಿದರು.
ಮಾಜಿ ಶಾಸಕ ಎಂ.ಪಿ.ಅಪ್ಪಚ್ಚುರoಜನ್, ರೈತ ಮೋರ್ಚಾದ ತಾಲ್ಲೂಕು ಅಧ್ಯಕ್ಷ ಮಚ್ಚಂಡ ಪ್ರಕಾಶ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.










