ಮಡಿಕೇರಿ ಸೆ.11 : ಕೊಡಗು ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ.) ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗಿದೆ ಎಂದು ಜಿ.ಪಂ.ಸಿಇಒ ವರ್ಣಿತ್ ನೇಗಿ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2023 ಸಮೀಕ್ಷೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಗ್ರಾ.ಪಂ.ಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.
ಜಿಲ್ಲೆಯನ್ನು ಈಗಾಗಲೇ ಒಡಿಎಫ್ ಪ್ಲಸ್ ಎಂದು ಘೋಷಿಸಲಾಗಿದೆ. ಗ್ರಾ.ಪಂ.ಗಳಲ್ಲಿ ಸ್ವಚ್ಛ ವಾಹಿನಿಯ ಮೂಲಕ ಮನೆ ಮನೆಯಿಂದ ಕಸ ಸಂಗ್ರಹಿಸಿ ಸೂಕ್ತವಾಗಿ ನಿರ್ವಹಣೆ ಮಾಡಲಾಗುತ್ತಿದೆ ಎಂದರು.
ಮಹಿಳಾ ಸ್ವಾವಲಂಬನೆಯ ಭಾಗವಾಗಿ ಸ್ವ ಸಹಾಯ ಸಂಘದ ಜೊತೆಗೆ ಒಪ್ಪಂದ ಮಾಡಿಕೊಂಡು ಸೂಕ್ತ ರೀತಿಯಲ್ಲಿ ಘನತ್ಯಾಜ್ಯ ಸಂಗ್ರಹಣೆ ಕೈಗೊಳ್ಳಲಾಗುತ್ತಿದೆ ಎಂದರು.
ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು ಮಾತನಾಡಿ ಗ್ರಾ.ಪಂ.ಜನಪ್ರತಿನಿಧಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಹಕಾರದಿಂದ ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯು ಯಶಸ್ವಿಯಾಗಿದೆ. ಜಿಲ್ಲೆಯ ಎಸ್‍ಬಿಎಂ(ಗ್ರಾ.) ಸಮಾಲೋಚಕರೂ ಸಹ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಜಿಲ್ಲೆಗೆ ಒಳ್ಳೆಯ ಹೆಸರು ತಂದಿದ್ದಾರೆ ಎಂದು ಪ್ರಶಂಸಿಸಿದರು.
ಇದೇ ವೇಳೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲ ಶಕ್ತಿ ಮಂತ್ರಾಲಯ ಇವರು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಯಡಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023. ಸಮೀಕ್ಷೆ ಮೂಲಕ ಗ್ರಾ.ಪಂ.ಗಳಲ್ಲಿ ಅನುಷ್ಠಾನ ಮಾಡಿರುವ ನೈರ್ಮಲ್ಯ ಘಟಕಾಂಶಗಳು ಹಾಗೂ ಒಡಿಎಫ್ ಪ್ಲಸ್ ಸುಸ್ಥಿರತೆಗೊಳಿಸಿ, ಮೂರು ಹಂತದಲ್ಲಿ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸರ್ವೆ ಕೈಗೊಂಡು ಒಡಿಎಫ್ ಪ್ಲಸ್ ಮಹಾತ್ವಕಾಂಕ್ಷೆ, ಒಡಿಎಫ್ ಪ್ಲಸ್ ರೈಸಿಂಗ್, ಒಡಿಎಫ್ ಪ್ಲಸ್ ಮಾದರಿ ವಿಭಾಗಗಳಲ್ಲಿ ಯಶಸ್ಸು ಸಾಧಿಸಿ ಸಂಪೂರ್ಣ ಒಡಿಎಫ್ ಪ್ಲಸ್ ಎಂದು ಘೋಷಿಸಲಾಗಿದೆ ಎಂದರು.
ಈ ವಿಭಾಗಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿರುವ ಮಡಿಕೇರಿ ತಾಲೂಕಿನ ಎಮ್ಮೆಮಾಡು, ಕಡಗದಾಳು, ಪೆರಾಜೆ, ಬಲ್ಲಮಾವಟಿ, ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ, ಪೊನ್ನಂಪೇಟೆ, ವಿರಾಜಪೇಟೆ ತಾಲೂಕಿನ ಹಾಲುಗುಂದ, ಚೆನ್ನಯ್ಯನಕೋಟೆ, ಪಾಲಿಬೆಟ್ಟ, ಕುಶಲಾನಗರ ತಾಲೂಕಿನ ಗುಡ್ಡೆಹೊಸೂರು, ನಂಜರಾಯಪಟ್ಟಣ ಮತ್ತು ಕೂಡುಮಂಗಳೂರು ಗ್ರಾಮ ಪಂಚಾಯಿತಿಗಳ ಗ್ರಾ.ಪಂ.ಅಧ್ಯಕ್ಷರು ಮತ್ತು ಪಿಡಿಒ ಅವರನ್ನು ಜಿಲ್ಲಾ ಮಟ್ಟದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗ್ರಾ.ಪಂ.ಅಧ್ಯಕ್ಷರು ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆಗೆ ಸಂಬಂಧಿಸಿದಂತೆ ಅಭಿಪ್ರಾಯ ಹಂಚಿಕೊಂಡರು. ಜಿ.ಪಂ.ಸಹಾಯಕ ಕಾರ್ಯದರ್ಶಿ ಜೀವನ್ ಕುಮಾರ್, ಸೋಮವಾರಪೇಟೆ ತಾ.ಪಂ.ಇಒ ಜಯಣ್ಣ, ಜಿಲ್ಲಾ ಎಸ್.ಬಿ.ಎಂ.ಸಮಾಲೋಚಕರು ಹಾಜರಿದ್ದರು.
Breaking News
- *ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ*
- *ಅಂತರಾಷ್ಟ್ರೀಯ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿಯ ಅಲುಫ್ ಎ.ಆರ್ ಚಾಂಪಿಯನ್*
- *ಮಡಿಕೇರಿಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ : ರಾಷ್ಟ್ರದ ಸದೃಢತೆಗೆ ಯುವಜನರು ಕೈಜೋಡಿಸಿ: ಸಿವಿಲ್ ನ್ಯಾಯಾಧೀಶೆ ಶುಭ*
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*