ಸುಂಟಿಕೊಪ್ಪ ಸೆ.12 : ಮಾದಾಪುರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಆಡಳಿತ ಮಂಡಳಿಯ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ಸ್ಥಾನಗಳನ್ನು ಗಳಿಸುವ ಮೂಲಕ ಆಡಳಿತ ಚುಕ್ಕಾಣಿ ಹಿಡಿದಿದೆ.
ಕಾಂಗ್ರೆಸ್‍ನಿಂದ ಮಾದಪುರ ವಲಯ ಕಾಂಗ್ರೆಸ್ ಅಧ್ಯಕ್ಷ ದಾದು ಬೋಪಯ್ಯ ಸೇರಿದಂತೆ ಎಲ್ಲಾ 13 ಸ್ಥಾನಗಳಿಗೆ ಆಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದರೂ 1 ಸ್ಥಾನಗಳಿಸದೆ ಹೀನಾಯ ಸೋಲು ಕಂಡಿದೆ.
ಮಾದಾಪುರ ಗ್ರಾಮ ಪಂಚಾಯಿತಿ ಸದಸ್ಯ ಕೆ.ಎ.ಲತೀಫ್ ಪಕ್ಷೇತರರಾಗಿ ಸ್ಪರ್ಧಿಸಿ ಜಯ ಸಾಧಿಸಿದ್ದರೆ. ಹಿರಿಯ ಸಹಕಾರಿ ಸಿ.ಎ.ತಮ್ಮಯ್ಯ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವಿನ ನಗೆ ಬೀರಿದ್ದಾರೆ.
ಕಾಂಗ್ರೆಸ್ ಪಕ್ಷದ ಆಭ್ಯರ್ಥಿಗಳ ಪರವಾಗಿ ಶಾಸಕ ಡಾ.ಮಂಥರ್‍ಗೌಡ ಸೋಮವಾರಪೇಟೆ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಪ್ರಚಾರ ನಡೆಸಿದರೂ ಮತದಾರರ ಮನಗೆಲ್ಲಲು ಸಾಧ್ಯವಾಗಲಿಲ್ಲ.
ಬಿಜೆಪಿಯ ಸಂಘದ ಅಧ್ಯಕ್ಷ ಬಿಜ್ಜಂಡ ಮೊಣ್ಣಪ್ಪ ಸುಬ್ರಮಣಿ, ನಾಪಂಡ ಉಮೇಶ ಉತ್ತಪ್ಪ, ಕುಟ್ಟಂಡ ಕುಟ್ಟಪ್ಪ, ಮುಕ್ಕಾಟಿರ ತಿಮ್ಮಯ್ಯ, ಪಿ.ಪಿ.ತಿಲಕ ಕುಮಾರ್, ನಾಗಂಡ ಭವಿನ್, ನಾಗಂಡ ಸೋನುದೇಚಮ್ಮ, ಸಿ.ಎಸ್.ಪವಿತ್ರ ಹರೀಶ, ಎಂ.ಆರ್.ಗಿರೀಶ,ಭೀಮಯ್ಯ ಹೆಚ್.ಈ., ಕೇಶವ ಎಂ.ವೈ,ಇವರು ಜಯಭೇರಿ ಸಾಧಿಸಿದ್ದಾರೆ.
ಮತಣಿಕೆ ನಂತರ ಬಿಜೆಪಿ ಅಭ್ಯರ್ಥಿಗಳು ಗೆಲುವು ಖಾತ್ರಿಯಾದ ನಂತರ ಮಾಜಿ ಸಚಿವರಾದ ಎಂ.ಪಿ.ಅಪ್ಪಚ್ಚುರಂಜನ್ ಮತದಾನ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿ 1990 ರಲ್ಲಿ ಮಾದಾಪುರ ಕೃಷಿ ಪತ್ತಿನ ಸಹಕಾರ ಸಂಘ ನಷ್ಟದಲ್ಲಿದ್ದಾಗ ಅಧ್ಯಕ್ಷರಾಗಿ ಅಧಿಕಾರ ನಡೆಸಿ 5 ಲಕ್ಷ ರೂ ಲಾಭಕ್ಕೆ ಸಂಘವನ್ನು ತರುವಲ್ಲಿ ಯಶಸ್ವಿಯಾಗಿದೆ. ಆ ನಂತರ ಸತತವಾಗಿ ಬಿಜೆಪಿ ಆಡಳಿತ ಮಂಡಳಿ ಸಂಘವನ್ನು ಮುನ್ನಡೆಸಿದ್ದು, ಇದೀಗ 39 ಲಕ್ಷ ರೂ. ಲಾಭಗಳಿಸುತ್ತ ಪ್ರಗತಿ ಪಥದಲ್ಲಿ ಸಾಗುತ್ತಿದೆ. ಸಂಘದ ಎಲ್ಲಾ ಸದಸ್ಯರುಗಳು ಸಂಘದಲ್ಲಿ ವ್ಯವಹಾರ ನಡೆಸುವ ಮೂಲಕ ಇನ್ನಷ್ಟು ಅಭಿವೃದ್ಧಿಗಳಿಸಲು ಸಹಕಾರ ನೀಡಬೇಕೆಂದು ಹೇಳಿದರು.
Breaking News
- *ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ಅರ್ಚಕರ ಮೇಲೆ ಹಲ್ಲೆ : ಕಾಂಗ್ರೆಸ್ ಕಾರ್ಯಕರ್ತ ಅಮಾನತು*
- *ಕಟ್ಟೆಮಾಡು ಗ್ರಾಮದ ಶ್ರೀ ಮಹಾ ಮೃತ್ಯುಂಜಯ ದೇವಸ್ಥಾನದ ಪ್ರಧಾನ ಅರ್ಚಕ ವಿಘ್ನೇಶ್ ಭಟ್ ಮೇಲೆ ಹಲ್ಲೆ*
- *ಸಿಎನ್ಸಿಯಿಂದ ಅಂತರಾಷ್ಟ್ರೀಯ ಹತ್ಯಾಕಾಂಡದ ನೆನಪಿನ ದಿನ ಆಚರಣೆ*
- *ಪದ್ಮಶ್ರೀ ಪುರಸ್ಕೃತ ಡಾ.ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಅಭಿನಂದನೆ*
- *‘ಕೃತಕ ಅಂಗಾಂಗಗಳ ಜೋಡಣೆ ಮತ್ತು ಆರೋಗ್ಯ ತಪಾಸಣೆ’ ಶಿಬಿರ : ಬಡವರಿಗೆ ಅಗತ್ಯ ಆರೋಗ್ಯ ಸೌಲಭ್ಯ : ಸಚಿವ ಭೋಸರಾಜು*
- *ರಾಜ್ಯದಲ್ಲೇ ವಿನೂತನ ಪ್ರಯತ್ನ : ‘ಕೊಡಗು ಪೊಲೀಸ್ ಸಾಂಸ್ಕೃತಿಕ ವೇದಿಕೆ’ ಉದ್ಘಾಟನೆ*
- *ಕೆ.ಎಸ್.ದರ್ಶನ್ ಗೆ ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರದಾನ*
- *ಕಾಲ್ಚೆಂಡು ಪಂದ್ಯಾವಳಿ : ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಚಾಂಪಿಯನ್*
- *ವಿರಾಜಪೇಟೆ : ವಿವಿಧತೆಯಲ್ಲಿ ಏಕತೆಕಂಡಿರುವ ಸಂವಿಧಾನವನ್ನು ಗೌರವಿಸುವಂತಾಗಬೇಕು : ವಕೀಲ ಪುಷ್ಪರಾಜ್*
- *ಸೋಮವಾರಪೇಟೆ : ಅಗ್ನಿಶಾಮಕ ಠಾಣೆಯ ನೂತನ ಕಟ್ಟಡ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*