Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಸಂವಿಧಾನ ಪೀಠಿಕೆ ವಾಚನ’ : ಕೊಡಗಿನಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಹೆಸರು ನೋಂದಣಿ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾಹಿತಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಸಂವಿಧಾನ ಪೀಠಿಕೆ ವಾಚನ’ : ಕೊಡಗಿನಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಹೆಸರು ನೋಂದಣಿ : ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾಹಿತಿ*

ಸೆಪ್ಟೆಂಬರ್ 12, 20234 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಸೆ.12 : ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15 ರಂದು ಬೆಳಗ್ಗೆ 10 ಗಂಟೆಗೆ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯುವ ‘ಸಂವಿಧಾನ ಪೀಠಿಕೆ ವಾಚನ’ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಕೋರಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ವಿವಿಧ ಸಮಾಜಗಳ ಮುಖಂಡರ ಜೊತೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತ ಸಂವಿಧಾನ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಮಾಜದ ಮುಖಂಡರು ಪಾಲ್ಗೊಂಡು ಕಾರ್ಯಕ್ರಮ ಯಶಸ್ಸುಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಮನವಿ ಮಾಡಿದರು.
ಭಾರತ ಸಾರ್ವಭೌಮತ್ವ, ಅಖಂಡತೆ ಮತ್ತು ಏಕತೆಯನ್ನು ಎತ್ತಿ ಹಿಡಿಯುವುದರ ಜೊತೆಗೆ, ಕಾಪಾಡುವುದು ಪ್ರತಿಯೊಬ್ಬ ಭಾರತೀಯರ ಸಂವಿಧಾನಬದ್ಧ ಮೂಲಭೂತ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿ.ಎನ್.ವೀಣಾ ಅವರು ಹೇಳಿದರು.
ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಂಡು ಸಂವಿಧಾನ ಪೀಠಿಕೆ ವಾಚನ ಮಾಡಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್ ಅವರು ಮಾತನಾಡಿ ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ವಿಶೇಷ ಅಭಿಯಾನವನ್ನು ಸೆಪ್ಟೆಂಬರ್, 15 ರಂದು ಆಯೋಜಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ 54 ಸಾವಿರ ಗುರಿಯಲ್ಲಿ ಈಗಾಗಲೇ 2 ಲಕ್ಷ ಕ್ಕೂ ಹೆಚ್ಚು ಜನರು ನೋಂದಣಿ ಮಾಡಿದ್ದಾರೆ. ಸೆಪ್ಟೆಂಬರ್, 15 ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಸಂವಿಧಾನ ಪೀಠಿಕೆ ವಾಚನ’ ಮಾಡಲಿದ್ದಾರೆ. ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಕೊಡಗು ಜಿಲ್ಲೆಯ 103 ಗ್ರಾ.ಪಂ.ಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ‘ಸಂವಿಧಾನ ಪೀಠಿಕೆ’ ಓದಬಹುದಾಗಿದೆ ಎಂದರು.
ಸೆಪ್ಟೆಂಬರ್, 15 ರ ಬೆಳಗ್ಗೆ 10 ಗಂಟೆ ವರೆಗೂ ಹೆಸರು ನೋಂದಣಿಗೆ ಅವಕಾಶವಿದ್ದು, ನೋಂದಣಿ ಮಾಡದಿರುವವರು ಹೆಸರು ನೋಂದಾಯಿಸಿಕೊಳ್ಳುವಂತೆ ಕೋರಿದರು.
ಸಂವಿಧಾನದ ಪೀಠಿಕೆ ಓದಲು ಆನ್‍ಲೈನ್ ನೋಂದಣಿ ಪ್ರಕ್ರಿಯೆ ಅತ್ಯಂತ ಸರಳವಾಗಿದೆ. ಸಮಾಜ ಕಲ್ಯಾಣ ಇಲಾಖೆ ರೂಪಿಸಿರುವ ವೆಬ್‍ಸೈಟ್ https://thepreamble-swdkar.in ನಲ್ಲಿ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ಇಮೇಲ್ ವಿಳಾಸ, ಮುಂತಾದ ವಿವರ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಇದಕ್ಕಾಗಿ ಒಟ್ಟು 10 ವಿಭಾಗಗಳನ್ನು ವೆಬ್‍ಸೈಟ್‍ನಲ್ಲಿ ಮಾಡಿದ್ದು, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯ ಶಾಲೆಗಳು, ಶಿಕ್ಷಣ, ಉನ್ನತ ಶಿಕ್ಷಣ, ವೈದ್ಯಕೀಯ ಶಿಕ್ಷಣ ಇಲಾಖೆಗಳ ಶಾಲೆ, ಕಾಲೇಜುಗಳು. ಎಲ್ಲ ರೀತಿಯ ಖಾಸಗಿ ಶಾಲೆ, ಕಾಲೇಜುಗಳು, ಹೀಗೆ ಕನಿಷ್ಟ 10 ಸದಸ್ಯರ ಗುಂಪು ಒಳಗೊಂಡು ನೋಂದಣಿ ಮಾಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ವಿವರಿಸಿದರು.
ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷರಾದ ಕುಡಿಯರ ಮುತ್ತಪ್ಪ ಅವರು ಮಾತನಾಡಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸಂವಿಧಾನ ಪೀಠಿಕೆ ಓದುವುದರ ಜೊತೆಗೆ ವಿವಿಧ ಕಾರ್ಯಕ್ರಮ ಏರ್ಪಡಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಹೆಸರು ನೋಂದಾಯಿಸುವಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೆಸರು ನೋಂದಾಯಿಸಲು ಅವಕಾಶ ಮಾಡಬೇಕು ಎಂದು ಸಲಹೆ ಮಾಡಿದರು.
ಭಾಗಮಂಡಲ ಲ್ಯಾಂಪ್ ಸೊಸೈಟಿ ಅಧ್ಯಕ್ಷರಾದ ಮಿಟ್ಟು ರಂಜಿತ್  ಮಾತನಾಡಿ ಹೆಸರು ನೋಂದಾಯಿಸುವ ನಿಟ್ಟಿನಲ್ಲಿ ಇನ್ನಷ್ಟು ಗ್ರಾಮೀಣ ಪ್ರದೇಶದಲ್ಲಿ ಮಾಹಿತಿ ನೀಡಬೇಕು ಎಂದು ಅವರು ಕೋರಿದರು.
ಯಾಕೂಬ್  ಮಾತನಾಡಿ ಗ್ರಾಮ ಸಭೆಗಳಲ್ಲಿ ಸಂವಿಧಾನ ಪೀಠಿಕೆ ಓದಿ ಕಾರ್ಯಕ್ರಮ ಆರಂಭಿಸುವಂತಾಗಬೇಕು ಎಂದು ಸಲಹೆ ಮಾಡಿದರು.
ನಾಗರಹೊಳೆ ವನದನ ವಿಕಾಸ ಕೇಂದ್ರದ ಅಧ್ಯಕ್ಷರಾದ ಜೆ.ಆರ್.ಪುಷ್ಪ  ಮಾತನಾಡಿ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವಂತಾಗಬೇಕು ಎಂದರು.
ಮೋಹನ್  ಮಾತನಾಡಿ ಸೆಪ್ಟೆಂಬರ್, 15 ರಂದು ಬೆಳಗ್ಗೆ 10 ಗಂಟೆಗೆ ರಾಜ್ಯಾದ್ಯಾಂತ ಕಾರ್ಯಕ್ರಮ ಏಕಕಾಲಕ್ಕೆ ನಡೆಯುವುದರಿಂದ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚಿನ ಜನರು ಪಾಲ್ಗೊಳ್ಳುವಂತಾಗಬೇಕು ಎಂದರು.
ಸಭೆಗೆ ಆಗಮಿಸಿದ ಪ್ರಮುಖರೊಬ್ಬರು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಅಂಗವಾಗಿ ವಿಚಾರ ಸಂಕಿರಣ ಏರ್ಪಡಿಸಬೇಕು ಎಂದು ಸಲಹೆ ಮಾಡಿದರು.
‘ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಎಚ್.ಎಲ್.ದಿವಾಕರ ಮಾತನಾಡಿ ಸಂವಿಧಾನ ಎಂದರೆ ಅಂಬೇಡ್ಕರ್, ಅಂಬೇಡ್ಕರ್ ಎಂದರೆ ಸಂವಿಧಾನ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಜಿಲ್ಲಾ ಕೇಂದ್ರದಲ್ಲಿ ನಿರ್ಮಿಸದಿರುವುದು ನೋವು ತಂದಿದೆ ಎಂದು ಇದೇ ಸಂದರ್ಭದಲ್ಲಿ ಬೇಸರ ವ್ಯಕ್ತಪಡಿಸಿದರು.’
ಜಿಲ್ಲಾ ಕೇಂದ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ದಶಕಗಳಿಂದ ಮನವಿ ಮಾಡುತ್ತಾ ಬರಲಾಗಿದೆ. ಆದರೆ ಯಾರ ಬಳಿ ಹೇಳಿಕೊಳ್ಳುವುದು ತಿಳಿಯುತ್ತಿಲ್ಲ ಎಂದು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
ಇದಕ್ಕೆ ಧ್ವನಿಗೂಡಿಸಿದ ಕುಡಿಯರ ಮುತ್ತಪ್ಪ ಅವರು ಜಿಲ್ಲೆಯಲ್ಲಿ ‘ಚೆಟ್ಟಿ ಕುಡಿಯ’ ಹೆಸರು ಇಡಬೇಕು ಎಂದು ಹಲವು ವರ್ಷಗಳಿಂದ ಮನವಿ ಮಾಡಿಕೊಂಡು ಬರಲಾಗುತ್ತಿದೆ. ಯಾವುದಾದರೂ ರಸ್ತೆಗೆ ಹೆಸರು ಇಡುವಂತಾಗಬೇಕು ಎಂದು ಮನವಿ ಮಾಡಿದರು. ಕೊಡಗು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾದ ಎಸ್.ಎಂ.ಚಂಗಪ್ಪ, ಇತರರು ಹಲವು ಸಲಹೆ ನೀಡಿದರು.
ಭಾಗಮಂಡಲ ಗಿರಿಜನ ಲ್ಯಾಂಪ್ಸ್ ಸಹಕಾರ ಸಂಘದ ನಿರ್ದೇಶಕರಾದ ಕೆ.ಎಂ.ಕಾವೇರಪ್ಪ, ನಾಗರಹೊಳೆ ಗಿರಿಜನ ಸಮಗ್ರ ಅಭಿವೃದ್ಧಿ ಕಲಾ ಸಂಸ್ಥೆಯ ಜೆ.ಬಿ.ರಮೇಶ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಮುನೀರ್ ಅಹಮ್ಮದ್, ರೇವತಿ ರಮೇಶ್, ಪ್ರಮುಖರಾದ ಜೆ.ಸಿ.ಜನಾರ್ಧನ, ಎಂ.ಎಸ್.ವೀರೇಂದ್ರ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ಸಣ್ಣ ಉಳಿತಾಯ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿಂಧು, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಸನ್ನ, ಹಿರಿಯ ಭೂವಿಜ್ಞಾನಿ ಶ್ರೀನಿವಾಸ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಸಿದ್ದೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಕೆ.ಎಂ.ಸೋಮಸುಂದರ, ಸಣ್ಣ ನೀರಾವರಿ ಇಲಾಖೆಯ ಎಇಇ ಕುಮಾರಸ್ವಾಮಿ, ಜಿಲ್ಲಾ ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರಘು, ಉಪ ನೋಂದಣಾಧಿಕಾರಿ ಕೆ.ಸೌಮ್ಯ ಲತಾ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜೆ.ಆರ್.ಪಾಲಾಕ್ಷ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಕೃಷ್ಣಪ್ರಸಾದ್, ಪ್ರಾದೇಶಿಕ ಸಾರಿಗೆ ಕಚೇರಿಯ ರೀಟಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧೀಕ್ಷಕರಾದ ಜಯಂತಿ, ಅಬಕಾರಿ ಉಪ ಅಧೀಕ್ಷಕರಾದ ಲಕ್ಷ್ಮೀಶ, ಐಟಿಡಿಪಿ ಇಲಾಖೆಯ ವ್ಯವಸ್ಥಾಪಕರಾದ ದೇವರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯವಸ್ಥಾಪಕರಾದ ಕವಿತಾ, ಸಮೀವುಲ್ಲಾ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.