Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
  • *ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*
  • *ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*
  • *ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಾರ್ಷಿಕ ಪ್ರತಿಷ್ಠಾ ದಿನಾಚರಣೆ : ನೂತನವಾಗಿ ನವಗ್ರಹ ಪ್ರತಿಷ್ಠಾಪನೆ*
  • *ಭಯೋತ್ಪಾದಕ ಹೇಳಿಕೆ : ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೊಡಗು ಬಿಜೆಪಿ ತೀವ್ರ ಅಸಮಾಧಾನ*
  • *ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ : ಮುಸ್ಲಿಮರನ್ನು ಕಡೆಗಣಿಸದಂತೆ ಆಗ್ರಹ*
  • *ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*
  • *ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡ್ಲಿಪೇಟೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘಕ್ಕೆ ರೂ. 61 ಲಕ್ಷ ಲಾಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡ್ಲಿಪೇಟೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘಕ್ಕೆ ರೂ. 61 ಲಕ್ಷ ಲಾಭ*

ಸೆಪ್ಟೆಂಬರ್ 12, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೊಡ್ಲಿಪೇಟೆ ಸೆ.12 : 2022.23 ನೇ ಸಂಘವು ಉತ್ತಮವಾಗಿ ಕಾರ್ಯ ಚಟುವಟಿಕೆ ನಡೆಸಿದ ಹಿನ್ನೆಲೆಯಲ್ಲಿ ರೂ. 61 ಲಕ್ಷ ಲಾಭಗಳಿಸಿ ಮುನ್ನಡೆಯುತ್ತಿದ್ದು,ಸಾಲ ಪಡೆದ ಸಂಘದ ಸದಸ್ಯರು ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಸಂಘದ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ಕೊಡ್ಲಿಪೇಟೆ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ಕೆ.ಪಿ.ಪ್ರಸನ್ನ ಮನವಿ ಮಾಡಿದರು.
ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ 136.98 ಲಕ್ಷ ಗೊಬ್ಬರ ಮತ್ತು ನಿಯಂತ್ರಿತ ದಾಸ್ತಾನು ಮಾರಾಟ ಮಾಡಲಾಗಿದೆ. ಎಲ್ಲಾ ಸದಸ್ಯರು ತಮ್ಮದೇ ಸಂಸ್ಥೆಯಲ್ಲಿ ವ್ಯವಹರಿಸಿ ಸಂಘದ ಬೆಳವಣಿಗೆಗೆ ಒತ್ತು ನೀಡಬೇಕು ಎಂದರು. ಸಂಘದಿಂದ ಇ ಸ್ಟಾಂಪ್ ವಿತರಿಸಲು ಪರವಾನಗಿ ಪಡೆದು ಇ ಸ್ಟಾಂಪ್ ವಿತರಿಸುತ್ತಿದ್ದು,ಇದರ ಪ್ರಯೋಜನವನ್ನು ಸದಸ್ಯರು ಪಡೆದುಕೊಳ್ಳಬೇಕು ಎಂದರು.
ಸಭೆಯ ಆರಂಭದಲ್ಲಿ ನಕಲಿ ಚಿನ್ನ(ರೋಲ್ ಗೋಲ್ಡ್) ಅಡವಿಟ್ಟು ಚಿನ್ನಾಭರಣ ಸಾಲ ಪಡೆದು ಸಂಘಕ್ಕೆ ವಂಚನೆ ಮಾಡಿದ ಪ್ರಕರಣ ಮಹಾಸಭೆಯಲ್ಲಿ ತೀವ್ರ ಚರ್ಚೆಗೆ ಕಾರಣವಾಯಿತು.
ಸದಸ್ಯ ಜಯಪ್ಪ ಅವರು ನಕಲಿ‌ ಚಿನ್ನ ಅಡವಿಟ್ಟ ಪ್ರಕರಣ ಕುರಿತು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು. ನಿರ್ದೇಶಕ ಎಸ್.ಡಿ. ತಮ್ಮಯ್ಯ ಅವರು ಮಾತನಾಡಿ ಬ್ಯಾಂಕಿನ ಚಿನ್ನ ಪರೀಕ್ಷಕ ಮಾಡುವ ವ್ಯಕ್ತಿ ನಕಲಿ ಚಿನ್ನ ಇಟ್ಟು ಸಾಲ ಪಡೆದಿದ್ದ,ಈ ಕುರಿತು ಕಾರ್ಯದರ್ಶಿಗಳಿಗೆ ಅನುಮಾನ ಬಂದು ಮತ್ತೆ ಬೇರೆ ಪರೀಕ್ಷಕರಿಂದ ಚಿನ್ನ ಪರೀಶಿಲನೆ‌ನಡೆಸಿದಾಗ ಇದು ನಕಲಿ ಎಂದು ಗೊತ್ತಾಗಿ ಮಂಜೂರು ಮಾಡಿದ ಸಾಲದ ಹಣವನ್ನು ಹಿಂಪಡೆದಿದ್ದಾರೆ ಎಂದು ಹೇಳಿದರು.

ಸದಸ್ಯರಾದ ಭಗವಾನ್ ಮಹೇಶ್,ಇಂದ್ರೇಶ್ ಮಾತನಾಡಿ ಸಂಘಕ್ಕೆ ಮೋಸ ಮಾಡಲು ಯತ್ನಿಸಿದ ವ್ಯಕ್ತಿ ವಿರುದ್ಧ ಏನು ಕ್ರಮ ಕೈಗೊಂಡಿದ್ದಿರಿ ಎಂದು ಪ್ರಶ್ನಿಸಿದರು. ಬ್ಯಾಂಕಿಗೆ ಆದ ನಷ್ಟವನ್ನು ಆಡಳಿತ ಮಂಡಳಿ ಭರಿಸಬೇಕು ಎಂದು ಒತ್ತಾಯಿಸಿದರು. ಮೋಸ ಮಾಡಿದ ವ್ಯಕ್ತಿ ಹಾಗೂ ಸಾಲ ನೀಡಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪಟ್ಟು ಹಿಡಿದ ಸದಸ್ಯರು ಆಡಳಿತ ಮಂಡಳಿ ವಿರುದ್ಧ ಆಕ್ರೋಶ, ಅಸಮಧಾನ ಹೊರಹಾಕಿದರು.
ಈ ಬಗ್ಗೆ ಸ್ಪಷ್ಟನೆ ನೀಡಿದ ಅಧ್ಯಕ್ಷ ಕೆ.ಸಿ.ಪ್ರಸನ್ನ ಅವರು ಈ ಪ್ರಕರಣ ನ್ಯಾಯಾಲಯ ಇದೆ. ನ್ಯಾಯಾಲಯ ತೀರ್ಪು ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಂಘದ ವತಿಯಿಂದ ಮಾರಾಟ ಮಾಡಿದ ಗೋಕುಲ್ ಗೊಬ್ಬರ ಕಳಪೆ ಎಂಬುದು ಸಾಬೀತಾಗಿದೆ.ಆದರೆ ಗೊಬ್ಬರ ಖರೀದಿಸಿದ ರೈತರಿಗೆ ತುಂಬ ನಷ್ಟ ಉಂಟಾಗಿದೆ.ಆದ್ದರಿಂದ ಗೊಬ್ಬರ ಖರೀದಿಸಿ ರೈತರಿಗೆ ಸಂಘದಿಂದ ಸೂಕ್ತ ಪರಿಹಾರ ಕೊಡಬೇಕು ಇಲ್ಲವೇ ಖರೀದಿಸಿದ ಹಣವನ್ನಾದರೂ ವಾಪಸು ಕೊಡಿ ಎಂದು ಭಗವಾನ್ ಒತ್ತಾಯಿಸಿದರು. ಈಗಾಗಲೇ ಈ ಪ್ರಕರಣ ಕೂಡ ನ್ಯಾಯಾಲಯದಲ್ಲಿದ್ದು,ತೀರ್ಪು ಬರಬೇಕು. ಏನೇ ಬಂದರೂ ನಾವು ರೈತರ ಹಿತಕಾಯಲು ಬದ್ಧರಾಗಿದ್ದೇವೆ ಎಂದು ಪ್ರಸನ್ನ ಹೇಳಿದರು.
ಸದಸ್ಯ ವೇದಕುಮಾರ್ ಮಾತನಾಡಿ ಸರ್ಕಾರದ ನಿಯಮದಂತೆ ಪಂಚಾಯತಿಗೊಂದು ಸಹಕಾರ ಸಂಘ ಎಂಬ ನಿಯಮದಡಿಯಲ್ಲಿ ಈಗಾಗಲೇ ಆಡಳಿತ ಮಂಡಳಿಯಲ್ಲಿ ಈ ಬಗ್ಗೆ ಚರ್ಚಿಸಿ ಒಪ್ಪಿಗೆ ಕೂಡ ನೀಡಿದ್ದಿರಿ ಅದರಂತೆಯೇ ಬ್ಯಾಡಗೊಟ್ಟಕ್ಕೆ ಪ್ರತ್ಯೇಕ ಸಂಘ ರಚನೆ ಮಾಡಿಬೇಕು ಎಂದು ಒತ್ತಾಯಿಸಿದರು. ಪ್ರತ್ಯೇಕ ಸಂಘ ರಚನೆಗೆ ಕೆಲವು ಸದಸ್ಯರು ವಿರೋಧ ವ್ಯಕ್ತಪಡಿಸಿ ಕೊಡ್ಲಿಪೇಟೆ ಸಂಘದಲ್ಲಿಯೇ ಮುಂದೂವರೆಸಬೇಕು ಎಂದು ಒತ್ತಾಯಿಸಿದರು. ಸದಸ್ಯ ಹನೀಫ್‌ ಮಾತನಾಡಿ, ಸರ್ಕಾರದಿಂದ ಉಚಿತವಾಗಿ ನೀಡುವ ಅಕ್ಕಿಯನ್ನು ತೆಗೆದುಕೊಂಡು ಹೋಗಲು ಬ್ಯಾಡಗೊಟ್ಟ ಸುತ್ತಮುತ್ತಲಿನ ಪ್ರದೇಶ ನೂರು ರೂಪಾಯಿ ಖರ್ಚು ಮಾಡಬೇಕು. ಆದ್ದರಿಂದ ಈ ಕೂಡಲೇ ಬ್ಯಾಡಗೊಟ್ಟ ಜನರ ಅನುಕೂಲಕ್ಕಾಗಿ ನ್ಯಾಯಬೆಲೆ ಅಂಗಡಿ ತೆರೆಯಬೇಕು ಎಂದು ಒತ್ತಾಯಿಸಿದರು.
2022-23ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ ಅನೇಕ ಲೋಷದೋಷಗಳಿದ್ದು, ಅವುಗಳನ್ನು ಸರಿಪಡಿಸಲು ಆಡಳಿತ ಮಂಡಳಿ ನಿರ್ಲಕ್ಷ್ಯ ತೋರಿದೆ ಎಂದು ಜಯಪ್ಪ,ಭಗವಾನ್, ಮಂಜುನಾಥ್,ರೇವಣ್ಣ ಅಸಮಧಾನ ವ್ಯಕ್ತಪಡಿಸಿದರು.ಬೇರೆ ಪ್ಯಾಕ್ಸ್ ಸಂಸ್ಥೆ ಆಡಿಟ್ ವರದಿಯನ್ನು ಕಾಪಿ ಮಾಡಿದ್ದಿರಿ.ಈ ನ್ಯೂನತೆ ಸರಿಪಡಿಸಿಕೊಂಡು ಮತ್ತೆ ಸಭೆ ಕರೆಯಲು ಕ್ರಮ ಕೈಗೊಳ್ಳಿ ಎಂದು ಸದಸ್ಯರು ಒತ್ತಾಯಿಸಿದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು.ವೈ.ಮಂಜುನಾಥ್ ವರದಿ ವಾಚನೆ ಮಾಡಿ ಅನುಮೋದನೆ ಪಡೆದರು. 2023-24ನೇ ಸಾಲಿನ ಅಂದಾಜು ಆಯ-ವ್ಯಯ ಪಟ್ಟಿಗೆ ಅನುಮೋದನೆ ನೀಡಲಾಯಿತು.
ಈ ಸಂದರ್ಭ ಸಂಘದ ಉಪಾಧ್ಯಕ್ಷ ಬಿ.ಇ.ರಾಜು,ನಿರ್ದೇಶಕರಾದ ಬಿ.ಕೆ.ಚಿಣ್ಣಪ್ಪ,ಎಸ್.ಡಿ.ಪ್ರಸನ್ನ, ಬಿ.ಕೆ.ಯತೀಶ್,ಎ.ಎನ್.ಭಾನುಮತಿ,ಜಿ.ಕೆ.ತೇಜ್ ಕುಮಾರ್, ಬಿ.ಪಿ.ಅಶೋಕ್, ಬಿ.ಕೆ.ರಂಜಿತಾ,ಕೆ.ಎಂ.ವಹಾಬ್,ಕೆ.ವಿ.ಮಲ್ಲೇಶ್,ಕೆ.ಬಿ.ಸುಬ್ರಮಣ್ಯಚಾರ್,ಜಿಲ್ಲಾ ಕೇಂದ್ರ ಬ್ಯಾಂಕಿನ ಪ್ರತಿನಿಧಿ ಎಂ.ಕೆ.ವೆಂಕಟೇಶ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಡಿ.ಅಮೃತ,ಸಿಬ್ಬಂದಿಗಳಾದ ಬಿ.ಕೆ.ಶಶಿಧರ್ ಇದ್ದರು.ಇದೇ ಸಂದರ್ಭ ಎಸ್ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಬಹುಮಾನ ವಿತರಣೆ ಮಾಡಲಾಯಿತು. ಸದಸ್ಯರಾದ ಸುದೀಂದ್ರಕುಮಾರ್,ಸುಲೈಮಾನ್,ಇಂದ್ರೇಶ್,ಬಾಬು ರಾಜೇಂದ್ರ ಪ್ರಸಾದ್, ಹರೀಶ್, ಮಂಜುನಾಥ್, ನಿರ್ಮಲಾ ಮತ್ತಿತರರು ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.20 NEWS DESK : ಕುಂಜಿಲ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮೇ6 ರಿಂದ 10ರವರೆಗೆ ಕಕ್ಕಬ್ಬೆಯ ಪ್ರೌಢ ಶಾಲಾ…

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*

ಏಪ್ರಿಲ್ 21, 2026

*ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಾರ್ಷಿಕ ಪ್ರತಿಷ್ಠಾ ದಿನಾಚರಣೆ : ನೂತನವಾಗಿ ನವಗ್ರಹ ಪ್ರತಿಷ್ಠಾಪನೆ*

ಏಪ್ರಿಲ್ 21, 2026

*ಭಯೋತ್ಪಾದಕ ಹೇಳಿಕೆ : ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕೊಡಗು ಬಿಜೆಪಿ ತೀವ್ರ ಅಸಮಾಧಾನ*

ಏಪ್ರಿಲ್ 21, 2026

*ಕಾಂಗ್ರೆಸ್ ವಿರುದ್ಧ ಸುನ್ನಿ ಸಮನ್ವಯ ಸಮಿತಿ ಅಸಮಾಧಾನ : ಮುಸ್ಲಿಮರನ್ನು ಕಡೆಗಣಿಸದಂತೆ ಆಗ್ರಹ*

ಏಪ್ರಿಲ್ 21, 2026

*ಅಕ್ಕಪಡೆಯಿಂದ ಮಡಿಕೇರಿಯ ವಿವಿಧೆಡೆ ತುರ್ತು ಸಹಾಯವಾಣಿಗಳ ಕುರಿತು ಜಾಗೃತಿ*

ಏಪ್ರಿಲ್ 20, 2026

*ಚಿಕ್ಕತ್ತೂರುವಿನಲ್ಲಿ ಹುಲಿ ಮಿತ್ರ ಕ್ರಿಕೆಟ್ ಪಂದ್ಯಾವಳಿ : ದುಬಾರೆ ಟೈಗರ್‌ ತಂಡ ಪ್ರಥಮ*

ಏಪ್ರಿಲ್ 20, 2026

*ಕೊಡಗು ಸೈನಿಕ ಶಾಲೆಯಲ್ಲಿ ದಕ್ಷಿಣ ವಲಯದ ಅಂತರ ಗುಂಪು ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಏಪ್ರಿಲ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.