ನಾಪೋಕ್ಲು ಸೆ.13 : ಪ್ರವಾಸಿ ತಾಣ ಅಬ್ಬಿಫಾಲ್ಸ್ ನಲ್ಲಿ ಭಾರೀ ಅಪಾಯವೊಂದು ತಪ್ಪಿದಂತಾಗಿದೆ. ಮುಖ್ಯರಸ್ತೆಯಿಂದ ಜಲಧಾರೆಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಭಾರೀ ಗಾತ್ರದ ಒಣಮರವೊಂದು ಮುರಿದು ಬಿದ್ದಿದ್ದು, ಕೂದಲೆಳೆ ಅಂತರದಿ0ದ ಪ್ರವಾಸಿಗರು ಪಾರಾಗಿದ್ದಾರೆ.
ಬೆಳಗ್ಗಿನಿಂದಲೇ ಜಲಧಾರೆ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದರು. ಈ ವೇಳೆ ಕಾಫಿ ತೋಟದಲ್ಲಿದ್ದ ಒಣ ಮರವೊಂದು ಏಕಾಏಕಿ ಮುರಿದು ರಸ್ತೆಗಡ್ಡಲಾಗಿ ಬಿದ್ದಿದೆ. ಮರ ಬಿದ್ದ ಸ್ಥಳದಿಂದ ಕೆಲವರು ಆಗಷ್ಟೇ ಮುಂದೆ ಸಾಗಿದ್ದರೆ, ಇನ್ನೂ ಕೆಲವರು ತರಾತುರಿಯಿಂದ ಜಲಧಾರೆಯನ್ನು ಕಣ್ತುಂಬಿಕೊಳ್ಳಲು ಬರುತ್ತಿದ್ದರು. ಅದೃಷ್ಟವಶಾತ್, ಮರ ಮಾರ್ಗಕ್ಕೆ ಅಡ್ಡಲಾಗಿ ಬೇಲಿಯ ಮೇಲೆ ಬಿದ್ದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.
ವರದಿ : ದುಗ್ಗಳ ಸದಾನಂದ.








