ವಿರಾಜಪೇಟೆ ಸೆ.13 : 2023-24ನೇ ಸಾಲಿನ ಕೊಡಗು ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ವಿರಾಜಪೇಟೆ ತಾಲೂಕು ಹಾಗೂ ಬಾಳೆಲೆ ಪ್ರೌಢಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಬಿಳುಗುಂದ ಸರ್ಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟವನ್ನು ಪ್ರತಿನಿಧಿಸಿದ್ದಾರೆ.
ಹಾಗೂ ಇದೇ ಶಾಲೆಯ ವಿದ್ಯಾರ್ಥಿನಿಯರು ಥ್ರೋ ಬಾಲ್ ಪಂದ್ಯಾವಳಿಯಲ್ಲಿ ತಾಲೂಕು ಮಟ್ಟದಲ್ಲಿ ಗೆಲುವು ಸಾಧಿಸಿ, ಜಿಲ್ಲಾ ಮಟ್ಟವನ್ನು ಪ್ರತಿನಿಧಿಸಲಿದ್ದಾರೆ ಎಂದು ಶಾಲಾ ಮುಖ್ಯಶಿಕ್ಷಕಿ ಅರುಣ್ ಆನ್ಸಿ ಡಿಸೋಜ ತಿಳಿಸಿದ್ದಾರೆ.
ದೈಹಿಕ ಶಿಕ್ಷಣ ಶಿಕ್ಷಕಿ ಎಸ್.ಜಿ.ಲಿನ್ನಿ ತರಬೇತುದಾರರಾಗಿದ್ದು, ಶಾಲೆಯ ಶಿಕ್ಷಕವರ್ಗ, ಸಿಬ್ಬಂದಿ ವರ್ಗ, ಎಸ್.ಡಿ.ಎಂ.ಸಿ. ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.









