ವಿರಾಜಪೇಟೆ ಸೆ.13 : ಮಕ್ಕಳ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರತಿಭಾ ಕಾರಂಜಿ, ಕಲೋತ್ಸವಗಳನ್ನು ಪ್ರಾರಂಭಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್ ಹೇಳಿದರು.
ಆರ್ಜಿ ಗ್ರಾಮದ ಪೆರಂಬಾಡಿಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಭಾಂಗಣದಲ್ಲಿ ನಡೆದ ವಿರಾಜಪೇಟೆ ಮತ್ತು ಕಲ್ತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಮಕ್ಕಳು ತಮ್ಮ ಪ್ರತಿಭೆ ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆಯಾಗಿದ್ದು, ಇಂತಹ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿನ ಪ್ರತಿಭೆ ಗುರುತಿಸುವ ಉತ್ತಮ ವೇದಿಕೆಯಾಗಿದೆ ಎಂದರು.
ಮಕ್ಕಳ ಪ್ರತಿಭೆಯನ್ನು ಅನಾವರಣ ಮಾಡುವ ಕೆಲಸ ಶಿಕ್ಷಕರಿಂದ ಆಗಬೇಕು. ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ನಮ್ಮ ಜಿಲ್ಲೆಯ ಮಕ್ಕಳು ಭಾಗವಹಿಸಿ ಬಹುಮಾನ ಪಡೆದು ನಮ್ಮ ಜಿಲ್ಲೆಗೆ ಕೀರ್ತಿ ತರಬೇಕು ಎಂದರು.
ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವನಜಾಕ್ಷಿ ಮಾತನಾಡಿ, ಪ್ರತಿಯೊಂದು ಮಗುವು ತನ್ನದೇ ಆದ ಪ್ರತಿಭೆಯನ್ನು ಹೊಂದಿರುತ್ತದೆ. ಇದನ್ನು ಗುರುತಿಸುವ ಕೆಲಸವನ್ನು ಪೋಷಕರು ಮತ್ತು ಶಿಕ್ಷಕರು ಮಾಡಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ಮಕ್ಕಳು ತೊಡಗಬೇಕು. ಪ್ರತಿಯೊಂದು ಮಗುವು ಕಲೆ, ಸಂಗೀತ ಮತ್ತು ಚಿತ್ರಕಲೆಯಂತಹ ವಿಭಿನ್ನ ಕಲೆಗಳನ್ನು ಹೊಂದಿರುತ್ತಾರೆ. ಇದನ್ನು ನಾವು ಪ್ರೋತ್ಸಾಹಿಸಿದಾಗ ಮಕ್ಕಳಲ್ಲಿನ ಪ್ರತಿಭೆ ಹೊರಹೊಮ್ಮಲಿದೆ ಎಂದು ತಿಳಿಸಿದರು.
ಕುಟ್ಟಂದಿ ಶಾಲೆಯ ಮುಖ್ಯ ಶಿಕ್ಷಕಿ ದೀಪಾ ಮಾತನಾಡಿ, ಕಲೋತ್ಸವ ಕಾರ್ಯಕ್ರಮವು ನಮ್ಮ ನಾಡಿನ ಸಂಸ್ಕೃತಿ ಬಿಂಬಿಸುವ ಸ್ಪರ್ಧೆಯಾಗಿದೆ. ಪ್ರತಿಭಾ ಕಾರಂಜಿ ಮತ್ತು ಕಲೋತ್ಸವಗಳು ಪಠ್ಯದ ಜತೆಗೆ ಮಕ್ಕಳಿಗೆ ಅವಶ್ಯಕವಾಗಿದೆ. ಎಲ್ಲ ಮಕ್ಕಳಲ್ಲೂ ಒಂದಲ್ಲ ಒಂದು ಪ್ರತಿಭೆ ಅಡಗಿರುತ್ತದೆ. ಸಿಕ್ಕಿದ ಅವಕಾಶಗಳನ್ನು ಧೈರ್ಯದಿಂದ ಬಳಸಿಕೊಂಡು ಕೀರ್ತಿ ತರಬೇಕು ಎಂದರು.
ಸಂತ ಅನ್ನಮ್ಮ ಶಾಲೆಯ ಮುಖ್ಯ ಶಿಕ್ಷಕ ಬೆನ್ನಿ ಮಾತನಾಡಿ, ಮಕ್ಕಳು ಸ್ಪರ್ಧಾ ಮನೋಭಾವದಿಂದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಬೇಕು. ಕಲಾ ಪ್ರದರ್ಶನ ನೀಡಿ ತಮ್ಮ ಪ್ರತಿಭೆಯನ್ನು ಹೊರಹಾಕಬೇಕು ಎಂದು ಶುಭ ಕೋರಿದರು.
ಆರ್ಜಿ ಗ್ರಾ.ಪಂ ಅಧ್ಯಕ್ಷೆ ಫಾತೀಮಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯ ಉಪೇಂದ್ರ, ಕೆ.ಟಿ.ಬಷೀರ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಮಣಿ, ಹೆಗ್ಗಳ ಶಾಲೆಯ ಮುಖ್ಯ ಶಿಕ್ಷಕಿ ಸುನೀತಾ, ಬೇಟೋಳಿ ಶಾಲೆಯ ಮುಖ್ಯ ಶಿಕ್ಷಕಿ ಸೀತಾ, ಅಮ್ಮತ್ತಿ ಒಂಟಿಯಂಗಡಿ ಕ್ಲಸ್ಟರ್‍ನ ಶುóಷಾ, ನಿವೃತ್ತ ಮುಖ್ಯ ಶಿಕ್ಷಕಿ ವಾರಿಜಾ ಬಾಯಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಎಸ್‍ಡಿಎಂಸಿ ಸದಸ್ಯೆ ನಮಿತಾ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲೆ ಮಮತಾ, ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಾಲ್ ಕುಮಾರ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪ್ರವೀಣ್, ಪ್ರೌಡಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಎಸ್.ತಮ್ಮಯ್ಯ, ಕಲ್ತೋಡು ಕ್ಲಸ್ಟರ್‍ನ ಸಿಆರ್‍ಪಿ ವಿ.ಟಿ.ವೆಂಕಟೇಶ್, ಬಿಆರ್‍ಪಿ ಗೀತಾಂಜಲಿ, ಸರಕಾರಿ ನೌಕರರ ಸಂಘದ ನಿರ್ದೆಶಕ ಮಂಜುನಾಥ್ ಹಾಜರಿದ್ದರು.
ಮೃತರಾದ ಶಿಕ್ಷಕರಿಗೆ ಕಾರ್ಯಕ್ರಮದಲ್ಲಿ ಸಂತಾಪ ಸೂಚಿಸಲಾಯಿತು.
ಇದೇ ಸಂದರ್ಭ ಎಸ್‍ಎಸ್‍ಎಲ್‍ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವೈಷ್ಣವಿ, ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಲಾಲ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಪ್ರಕಾಶ್, ಶಿಕ್ಷಣ ಸಮನ್ವಯಾಧಿಕಾರಿ ವನಜಾಕ್ಷಿ ಅವರನ್ನು ಸನ್ಮಾನಿ, ಗೌರವಿಸಲಾಯಿತು.
ವಿರಾಜಪೇಟೆ ಹಾಗೂ ಕಲ್ತೋಡು ಕ್ಲಸ್ಟರ್‍ಗೆ ಸೇರಿದ ಶಾಲೆಗಳ ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸ್ದಿರು.
ಬೇರೆ ಬೇರೆ ವೇದಿಕೆಗಳಲ್ಲಿ ವೈಯುಕ್ತಿಕ ಸ್ಪರ್ಧೆ ಹಾಗೂ ಗುಂಪು ಸ್ಪರ್ಧೆಗಳು ನಡೆದವು.









